ಅಫಜಲಪುರ: ‘ಮಹಿಳಾ ಸಬಲೀಕರಣ, ಹಕ್ಕುಗಳ ರಕ್ಷಣೆ, ತಾರತಮ್ಯದ ನಿರ್ಮೂಲನೆ ಮತ್ತು ಸಮಾಜದಲ್ಲಿ ಮಹಿಳೆಯರ ಕೊಡುಗೆಯನ್ನು ಸ್ಮರಿಸುವ ಸಲುವಾಗಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಉದ್ದೇಶವಾಗಿದೆ’ ಎಂದು ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂಜು ಬಗಲಿ ತಿಳಿಸಿದರು.

ಪಟ್ಟಣ ಶಾರದಾ ಕಲ್ಯಾಣ ಮಂಟಪದಲ್ಲಿ ಭಾನುವಾರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ವತಿಯಿಂದ ಏರ್ಪಡಿಸಲಾಗಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಪುರುಷರಷ್ಟೇ ಮಹಿಳೆಯರಿಗೂ ಸಮಾನ ಹಕ್ಕುಗಳು ಮತ್ತು ಅವಕಾಶಗಳನ್ನು ಒದಗಿಸುವ ಅಗತ್ಯವಿದೆ. ಈ ದಿನ ಮಹಿಳೆಯರ ಸಾಧನೆಯನ್ನು ಗೌರವಿಸುವುದರ ಜೊತೆಗೆ ಲಿಂಗ ಸಮಾನತೆ ಬಗ್ಗೆ ಜಾಗೃತಿ ಮೂಡಿಸುವ ಮಹತ್ವದ ದಿನವಾಗಿದೆ. ಸಮಾಜದ ಎಲ್ಲಾ ಕ್ಷೇತ್ರಗಳಲ್ಲಿ ಮಹಿಳೆಯರು ಮಾಡಿರುವ ಕೊಡುಗೆಯನ್ನು ವಿಶೇಷವಾಗಿ ಸ್ಮರಿಸಲಾಗುತ್ತದೆ’ ಎಂದು ಹೇಳಿದರು.

ಮಹಿಳಾ ಸರ್ಕಾರಿ ನೌಕರರ ಸಂಘದ ಕಲಬುರಗಿ ಜಿಲ್ಲಾಧ್ಯಕ್ಷೆ ನಂದನಿ ಸನಬಾಳ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ‘ಲಿಂಗ ತಾರತಮ್ಯ ಮುಕ್ತ ಸಮಾಜ ಮತ್ತು ಸಮಾನತೆಯ ಸಂದೇಶವನ್ನು ನೀಡಲು ಮಹಿಳಾ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಅಲ್ಲದೇ ಸಮಾಜದ ಪ್ರತಿಯೊಂದು ಕ್ಷೇತ್ರದಲ್ಲಿ ಮಹಿಳೆಯರು ಸಾಧಿಸಿದ ಪ್ರಗತಿಯನ್ನು ಗುರುತಿಸುವ ದಿನವಾಗಿದೆ’ ಎಂದು ನುಡಿದರು.

ತಹಶೀಲ್ದಾರ್ ಸಂಜುಕುಮಾರ ದಾಸರ್ ಮಾತನಾಡಿ, ‘ದೇಶದ ಆರ್ಥಿಕ ವ್ಯವಸ್ಥೆಗೆ ಅವರು ಕೊಡುಗೆ ಅಪಾರವಾಗಿದೆ. ಇಂದಿನ ಸಮಾಜದಲ್ಲಿ ಮಹಿಳೆಯರು ಶಿಕ್ಷಣ, ವಿಜ್ಞಾನ, ರಾಜಕೀಯ, ಕ್ರೀಡೆ ಮತ್ತು ವ್ಯಾಪಾರ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದ್ದಾರೆ’ ಎಂದರು.

ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯರು ಆಶೀರ್ವಚನ ನೀಡಿ, ‘ಪ್ರತಿ ವರ್ಷ ಮಾರ್ಚ್ 8ರಂದು ವಿಶ್ವದಾದ್ಯಂತ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಇದು ಕೇವಲ ಒಂದು ದಿನದ ಆಚರಣೆಯಲ್ಲ, ಪ್ರತಿಯೊಂದು ಕ್ಷೇತ್ರದಲ್ಲಿ ಮಹಿಳೆಯರು ಸಾಧಿಸಿದ ಪ್ರಗತಿಯನ್ನು ಗುರುತಿಸುವ, ಅವರ ಹಕ್ಕುಗಳಿಗಾಗಿ ನಡೆದ ಹೋರಾಟವನ್ನು ಸ್ಮರಿಸುವ ಮತ್ತು ಲಿಂಗ ಸಮಾನತೆಯತ್ತ ಹೆಜ್ಜೆ ಹಾಕುವ ಸಂಕಲ್ಪದ ದಿನವಾಗಿದೆ’ ಎಂದು ಹೇಳಿದರು.

ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಸವರಾಜ ಬಳುಂಡಗಿ, ಕಾರ್ಯದರ್ಶಿ ಮಹೇಶ ಹೂಗಾರ್, ಚೇತನ, ಮಲ್ಲೇಶಪ್ಪ ಬಿಂಜೆಗೇರಿ , ಬಸವರಾಜ ಕಲ್ಲೂರ್, ಸಾಧಿಕ್ ನಾಗೂರ್ ಮಾತನಾಡಿದರು.

ಸಮಾರಂಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಸುಮಾರು 40 ಮಹಿಳಾ ನೌಕರರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಶಾಂತ ಬಿಂದಿಗೆ, ಶರಣಮ್ಮ, ಸಿದ್ದು, ಪ್ರವೀಣ ದೇಸಾಯಿ, ಗುರು ಹಂಡಿ, ಬಾಗಪ್ಪ ತಳವಾರ, ಶಿವಶರಣ ಸಂಗೊಳ್ಳಿ ಸೇರಿದಂತೆ ಇತರರು ಹಾಜರಿದ್ದರು. ಅಬ್ದುಲ್ ಸತ್ತಾರ್ ಸ್ವಾಗತಿಸಿದರು. ಶಾರದಾ ಆವಟೆ ನಿರೂಪಿಸಿದರು. ಉಪನ್ಯಾಸಕ ಮಲ್ಲಿಕಾರ್ಜುನ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.