ಅಫಜಲಪುರ: ‘ದಿನದಿಂದ ದಿನಕ್ಕೆ ಬಿಸಿಲಿನ ತಾಪ ಹೆಚ್ಚುತ್ತಿದೆ. ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳುತ್ತಿದೆ. ಅದಕ್ಕಾಗಿ ಎಲ್ಲಾ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ಕುಡಿಯುವ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು’ ಎಂದು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ವೀರಣ್ಣ ಕೌಲಗಿ ಸೂಚಿಸಿದರು.

ತಾಲ್ಲೂಕಿನ ಬಳೂರ್ಗಿ ಗ್ರಾಮದ ಕೆರೆಯಲ್ಲಿ ಜೆಜೆಎಂ ಕಾಮಗಾರಿ ಪರಿಶೀಲನೆ ಮಾಡಿ, ಬಳಿಕ ಮಾತನಾಡಿದ ಅವರು,‘ಬಳೂರ್ಗಿ ಗ್ರಾಮದಲ್ಲಿ ಜೆಜೆಎಂ ಕಾಮಗಾರಿ ಮುಗಿದಿದೆ. ಸಣ್ಣಪುಟ್ಟ ಕೆಲಸ–ಕಾರ್ಯಗಳನ್ನು ತಕ್ಷಣ ಮುಗಿಸಿ, ವಾರದಲ್ಲಿ ಕುಡಿಯುವ ನೀರು ಪೂರೈಕೆ ಮಾಡಬೇಕು’ ಎಂದು ಎಂಜಿನಿಯರ್ಗಳಿಗೆ ತಾಕೀತು ಮಾಡಿದರು.

‘ಗ್ರಾಮದ ಹೊರವಲಯದ ಬಾವಿಯಲ್ಲಿ ಸಾಕಷ್ಟು ನೀರಿದೆ. ಅದರ ಬದಿ ಒಂದು ಕೊಳವೆಬಾವಿ ಇರುವುದರಿಂದ ಅದಕ್ಕೆ ವಿದ್ಯುತ್ ಪಂಪ್ಸೆಟ್ ಅಳವಡಿಸಿ, ಬಾವಿಗೆ ನೀರು ಪೂರೈಕೆ ಮಾಡಬೇಕು. ಕೆರೆಯಲ್ಲಿನ ಕೊಳವೆ ಬಾವಿಗೆ ಪಂಪ್ಸೆಟ್ ಅಳವಡಿಸಿ, ಜೆಜೆಎಂ ಟ್ಯಾಂಕ್ಗೆ ನೀರು ಪೂರೈಕೆ ಮಾಡಬೇಕು’ ಎಂದರು.

‘ಬಸವ ಜಯಂತಿಯ ದಿನ ಗ್ರಾಮದಲ್ಲಿ ಜಾತ್ರೆ ಇದೆ. ಆಗ ಕುಡಿಯುವ ನೀರು ತೊಂದರೆ ಆಗದಂತೆ ನೋಡಿಕೊಳ್ಳಬೇಕು. ನೀರಿಗೆ ಸಂಬಂಧಿಸಿದ ಸಣ್ಣಪುಟ್ಟ ಕೆಲಸಗಳನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಭಿವೃದ್ಧಿ ಅಧಿಕಾರಿಗಳು ಮಾಡಿಕೊಳ್ಳಬೇಕು. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಎಂಜಿನಿಯರ್ಗಳು ತಮ್ಮ ತಮ್ಮ ವ್ಯಾಪ್ತಿಯ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ಬಗ್ಗೆ ಮೇಲಿಂದ ಮೇಲೆ ಅಭಿವೃದ್ಧಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳಬೇಕು. ತಕ್ಷಣ ಸ್ಪಂದಿಸಿ ಕುಡಿಯುವ ನೀರು ಪೂರೈಕೆ ಮಾಡಬೇಕು’ ಎಂದು ತಿಳಿಸಿದರು.

ಅಭಿವೃದ್ಧಿ ಅಧಿಕಾರಿಗಳಾದ ಸಂತೋಷ ಬೂಸನೂರ್ ಗ್ರಾಮದ ಜಲಮೂಲಗಳ ಕುರಿತು ಇಒಗೆ ಮಾಹಿತಿ ನೀಡಿದರು. ಎಂಜಿನಿಯರ್ ಮೋಹನ್ ಚೌಹಾಣ್ ಅವರು ಜೆಜೆಎಂ ಗುತ್ತಿದಾರರನ್ನು ಸಂಪರ್ಕಿಸಿ ಕಾಮಗಾರಿ ಆರಂಭಿಸುವಂತೆ ಸೂಚಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260404-31-398317121

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.