ಅಫಜಲಪುರ: ‘ತಾಲ್ಲೂಕಿನಲ್ಲಿ ಅನೇಕ ವರ್ಷಗಳಿಂದ ಕೆರೆ, ಕಾಲುವೆ, ನದಿ, ಹಳ್ಳ–ಕೊಳ್ಳಗಳನ್ನು ಒತ್ತುವರಿ ಮಾಡಿಕೊಂಡು ಸಾಗುವಳಿ ಮಾಡಲಾಗುತ್ತಿದೆ. ಈ ಕುರಿತು ಸರ್ಕಾರ ಗಂಭೀರ ಚಿಂತನೆ ನಡೆಸಬೇಕು. ಒತ್ತುವರಿ ಮಾಡುತ್ತಿರುವ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು’ ಎಂದು ತಾಲ್ಲೂಕು ಪ್ರಾಂತ ರೈತ ಸಂಘದ ಅಧ್ಯಕ್ಷ ಶ್ರೀಮಂತ ಬಿರಾದಾರ, ಕಾರ್ಯದರ್ಶಿ ರಮೇಶ ಪಾಟೀಲ ಆಗ್ರಹಿಸಿದರು.

ಪಟ್ಟಣದಲ್ಲಿ ಗುರುವಾರ ನಡೆದ ಜಂಟಿ ಪತ್ರಿಕಾಗೋಷ್ಠಿ ಮಾತನಾಡಿದ ಅವರು, ಅಮರ್ಜಾ ಹಾಗೂ ಬೋರಿ ಹಳ್ಳಗಳಿಗೆ ಸೇತುವೆಗಳು ಇಲ್ಲದ ಕಾರಣ ಮಳೆಗಾಲದಲ್ಲಿ ಮಣ್ಣಿನ ಸವಕಳಿಯಾಗಿತ್ತಿದೆ. ಅಲ್ಲದೆ ಬೇಸಿಗೆಯಲ್ಲಿ ಕೃಷಿ ಹಾಗೂ ಕುಡಿಯಲು ನೀರಿನ ತೊಂದರೆಯಾಗುತ್ತದೆ. ಹೀಗಾಗಿ ಅಮರ್ಜಾ ಮತ್ತು ಬೋರಿ ಹಳ್ಳಕ್ಕೆ ಸಣ್ಣ ಸಣ್ಣ ಸೇತುವೆಗಳನ್ನು ನಿರ್ಮಿಸಬೇಕು ಎಂದು ಆಗ್ರಹಿಸಿದರು.

‘ಸಣ್ಣ ನೀರಾವರಿ ಇಲಾಖೆ ಹಾಗೂ ಜನಪ್ರತಿನಿಧಿಗಳು ಈ ಕುರಿತು ಚಿಂತನೆ ನಡೆಸಿ, ಕ್ರಿಯಾಯೋಜನೆ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಬೇಕು. ಸರ್ಕಾರ ಮಟ್ಟದಲ್ಲಿ ಅನುಮೋದನೆ ಸಿಕ್ಕರೆ ಈ ಭಾಗದ ಜನರಿಗೆ ಸಾಕಷ್ಟು ಅನುಕೂಲವಾಗಲಿದೆ’ ಎಂದರು.

ತಾಲ್ಲೂಕು ಪ್ರಾಂತ ಸಂಘದ ಪ್ರಧಾನ ಕಾರ್ಯದರ್ಶಿ ಗುರು ಚಾಂದಕೋಟೆ ಮಾತನಾಡಿ, ‘ಭೀಮಾಏತ ನೀರಾವರಿ ಆರಂಭವಾಗಿ 20 ವರ್ಷ ಕಳೆದರೂ ಈವರೆಗೆ ಬಳುಂಡಗಿ ಏತ ನೀರಾವರಿ ಕಾಲುವೆ ಅಡಿ 32 ಗ್ರಾಮಗಳಿಗೆ ಮತ್ತು ಅಳ್ಳಗಿ (ಬಿ) ಏತ ನೀರಾವರಿ ಕಾಲುವೆ ಅಡಿ 11 ಗ್ರಾಮಗಳ ಕಾಲುವೆಗಳಿಗೆ ನೀರು ಹರಿದಿಲ್ಲ. ಈ ಯೋಜನೆಗೆ ಸುಮಾರು ₹900 ಕೋಟಿ ಖರ್ಚು ಮಾಡಿದ್ದರು. ರೈತರಿಗೆ ನೀರು ಹರಿಯುತ್ತಿಲ್ಲ ಎಂದು ಆರೋಪಿಸಿದರು.

‘ತಾಲ್ಲೂಕಿನ ಹವಳಗಾ ರೇಣುಕಾ ಸಕ್ಕರೆ ಕಾರ್ಖಾನೆ ದಿನಕ್ಕೆ 6 ಸಾವಿರ ಟನ್ ಕಬ್ಬು ನುರಿಸುತ್ತದೆ. ಕಾರ್ಖಾನೆಯ ತ್ಯಾಜ್ಯ ಭೀಮಾ ನದಿ ಒಡಲು ಸೇರುತ್ತಿದೆ. ಇದರಿಂದ ಸುಮಾರು ಮೂವತ್ತಕ್ಕೂ ಹೆಚ್ಚು ಗ್ರಾಮಗಳು ಕಲುಷಿತವಾದ ನೀರನ್ನು ಕುಡಿಯುವಂತಾಗಿದೆ’ ಎಂದರು.

ತಾಲ್ಲೂಕು ಸ್ವಾಭಿಮಾನಿ ಬೆಳೆಗಾರ ಸಂಘದ ಸದಸ್ಯ ಬಾಪು, ಬಸವರಾಜ ಮಂಗಳೂರು, ಭೀಮರಾಯ ಗೌರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-31-871673891

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.