ಅಫಜಲಪುರ: ತಾಲ್ಲೂಕಿನ ನೀಲೂರು-ಗುಡೂರು ರಸ್ತೆ ನಿರ್ಮಾಣ ಕಾಮಗಾರಿ ನಾಲ್ಕು ವರ್ಷ ಕಳೆದರೂ ಪೂರ್ಣಗೊಳ್ಳದೆ ಇರುವುದರಿಂದ ಸಂಬಂಧಪಟ್ಟವರ ವಿರುದ್ಧ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

2020-21ನೇ ಸಾಲಿನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್ಡಿಬಿ) ಮೈಕ್ರೋ ಯೋಜನೆಯಡಿ ₹2.57 ಕೋಟಿ ವೆಚ್ಚದಲ್ಲಿ 2.5 ಕಿಲೋ ಮೀಟರ್ ರಸ್ತೆ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿತ್ತು. ಆದರೆ, ಗುತ್ತಿಗೆದಾರರು ಅಲ್ಪ ಪ್ರಮಾಣದ ಕಾಮಗಾರಿ ನಡೆಸಿ ಬಹುಪಾಲು ಬಿಲ್ ಎತ್ತಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ರಸ್ತೆ ಕಾಮಗಾರಿ ಅಪೂರ್ಣವಾಗಿರುವ ಪರಿಣಾಮ ವಿದ್ಯಾರ್ಥಿಗಳು, ರೈತರು ಹಾಗೂ ಗ್ರಾಮಸ್ಥರು ದಿನನಿತ್ಯ ಸಂಚಾರಕ್ಕೆ ತೊಂದರೆ ಅನುಭವಿಸುತ್ತಿದ್ದಾರೆ. ವಿಶೇಷವಾಗಿ ಮಳೆಗಾಲದಲ್ಲಿ ರಸ್ತೆ ದುಸ್ಥಿತಿಯಿಂದ ವಾಹನ ಸಂಚಾರ ಕಷ್ಟಕರವಾಗುತ್ತಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.

ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು, ನಡೆದಿರುವ ಕಾಮಗಾರಿಯ ಗುಣಮಟ್ಟ ಪರಿಶೀಲನೆ ನಡೆಸಬೇಕು ಹಾಗೂ ನಿರ್ಲಕ್ಷ್ಯ ತೋರಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಜಿಲ್ಲಾ ಆಡಳಿತ ಹಾಗೂ ಕೆಕೆಆರ್ಡಿಬಿ ಅಧಿಕಾರಿಗಳು ಸಮಸ್ಯೆಗೆ ತಕ್ಷಣ ಸ್ಪಂದಿಸಿ ರಸ್ತೆ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಶರಣು ಹಾಳಮಳ್ಳಿ, ಭೀಮ ಬಡದಾಳ, ವಿಶ್ವನಾಥ ಅಷ್ಟಗಿ, ರವೀಂದ್ರ ಮಡಿವಾಳ, ಮಂಜುನಾಥ ಹೊಸಗೌಡರ, ಮಾಂತೇಶ ಹೂಗಾರ್, ಮಹಾನಿಂಗಪ್ಪ ನಾಯ್ಕೋಡಿ, ಶಿವಕುಮಾರ ಲೋನಿ, ಸೈಬಣ್ಣ ಮುಗುದಿ ಹಾಗೂ ಸದಾನಂದ ಹೂಗಾರ್ ಇತರರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-31-579953637

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.