ಅಫಜಲಪುರ (ಕಲಬುರಗಿ ಜಿಲ್ಲೆ): ತಾಲ್ಲೂಕಿನ ಬಳ್ಳೂರ್ಗಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು, ಗ್ರಾಮಸ್ಥರು ರೊಚ್ಚಿಗೆದ್ದು ಬುಧವಾರ ಬೆಳಿಗ್ಗೆ ಸಿಬ್ಬಂದಿಗಳನ್ನು ಹೊರಗೆ ಹಾಕಿ ಗ್ರಾಮ ಪಂಚಾಯಿತಿಗೆ ಬೀಗ ಹಾಕಿ ಧರಣಿ ಆರಂಭಿಸಿದ್ದಾರೆ.

ಗ್ರಾಮದಲ್ಲಿ ಜೆಜೆಎಂ ಕಾಮಗಾರಿ ಮುಗಿದರೂ ಈವರೆಗೂ ಗ್ರಾಮ ಪಂಚಾಯಿತಿಗೆ ಹಸ್ತಾಂತರವಾಗಿಲ್ಲ ಮತ್ತು ಜೆಜೆಎಂ ನೀರು ಪೂರೈಕೆ ಆಗುವ ಪೈಪ್ ಹೊಡೆದು ಹೋಗಿದೆ. ಅದನ್ನು ದುರಸ್ತಿ ಮಾಡಲು ಯಾರೂ ಮುಂದೆ ಬರುತ್ತಿಲ್ಲ. ಅಲ್ಲದೆ ಗ್ರಾಮದಲ್ಲಿ ಕೊರೆದಿರುವ ಕೊಳವೆಬಾವಿಗಳ ಅಂತರ್ಜಲಮಟ್ಟ ಕಡಿಮೆಯಾಗಿದೆ ಎಂದು ಧರಣಿ ನಿರತರು ದೂರಿದರು.

ಗ್ರಾಮದಲ್ಲಿ ಸುಮಾರು 5 ಸಾವಿರ ಜನಸಂಖ್ಯೆ ಇದ್ದು ಈಗಾಗಲೇ ಹಲವಾರು ಬಾರಿ ಗ್ರಾಮಸ್ಥರು ಕುಡಿಯುವ ನೀರಿಗಾಗಿ ತಾಲ್ಲೂಕು ಆಡಳಿತಕ್ಕೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

'ಗ್ರಾಮ ಪಂಚಾಯಿತಿಯಲ್ಲಿ ಕುಡಿಯುವ ನೀರಿಗಾಗಿ ಒಂದು ನಯಟಪೈಸೆ ಅನುದಾನವಿಲ್ಲ. ಸರ್ಕಾರವು ನಮಗೆ ಅನುದಾನವನ್ನು ನೀಡುತ್ತಿಲ್ಲ. ನಾವು ಹೇಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು? ಕೊಳವೆ ಬಾವಿಗಳ ದುರಸ್ತಿಗೂ ನಮ್ಮ ಹತ್ತಿರ ಹಣ ಇಲ್ಲ. ನಾವು ಹಲವಾರು ಬಾರಿ ಸಭೆಯಲ್ಲಿ ಅನುದಾನ ಕೇಳಿದ್ದರೂ ಸರ್ಕಾರ ನೀಡುತ್ತಿಲ್ಲ. ಹೀಗಾಗಿ ಜನರು ಗ್ರಾಮ ಪಂಚಾಯಿತಿಯಿಂದ ನಮ್ಮನ್ನು ಹೊರಗೆ ಹಾಕಿ ಬೀಗ ಹಾಕಿದ್ದಾರೆ' ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಸಂತೋಷ್ ಬಸನೂರು ಅಸಹಾಯಕತೆ ವ್ಯಕ್ತಪಡಿಸುತ್ತಾರೆ.

'ತಿಂಗಳ ಹಿಂದೆ ಶಾಸಕರ ಅಧ್ಯಕ್ಷತೆಯಲ್ಲಿ ಕುಡಿಯುವ ನೀರಿಗಾಗಿ ಟಾಸ್ಕ್ ಫೋರ್ಸ್ ಸಭೆಯನ್ನು ಮಾಡಲಾಯಿತು. ಆದರೆ ಸಭೆಯಲ್ಲಿ ಅನುದಾನದ ಬಗ್ಗೆ ಯಾರು ಮಾತನಾಡಲಿಲ್ಲ. ಕೇವಲ ಸಣ್ಣ ಪುಟ್ಟ ಕೆಲಸ ಕಾರ್ಯಗಳು, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕುಡಿಯುವ ನೀರಿನ ಕೆಲಸ ಮಾಡಿಕೊಳ್ಳಿ ಎಂದು ಹೇಳಿ ಸಭೆ ಮುಗಿಸಿದರು ಎಂದು ಅಲವತ್ತುಕೊಂಡರು.

ಈ ಕುರಿತು ಪ್ರತಿಕ್ರಿಯಿಸಿದ ತಹಶೀಲ್ದಾರ್, 'ನಾನು ತಕ್ಷಣ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅವರಿಗೆ ಕಳುಹಿಸಿಕೊಡುತ್ತೇನೆ. ಆದಷ್ಟು ಬೇಗನೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲು ಪ್ರಯತ್ನ ಮಾಡುತ್ತೇವೆ' ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.