ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಫಜಲಪುರ: ನಿಷ್ಕ್ರಿಯ ಬಾಪೂಜಿ ಸೇವಾ ಕೇಂದ್ರಗಳು

ಗ್ರಾ. ಪಂ ನಿರ್ಲಕ್ಷ್ಯ, ಸಿಬ್ಬಂದಿ ಕೊರತೆ
Last Updated 10 ಜನವರಿ 2022, 5:57 IST
ಅಕ್ಷರ ಗಾತ್ರ

ಅಫಜಲಪುರ: ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಹಲವಾರು ಅಗತ್ಯ ಸೇವೆಗಳನ್ನು ಪಡೆದುಕೊಳ್ಳಲು ಸರ್ಕಾರ ಬಾಪೂಜಿ ಸೇವಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈ ಕೇಂದ್ರಗಳಲ್ಲಿ ದೊರೆಯುವ ಸರ್ಕಾರದ ಸೌಲಭ್ಯಗಳನ್ನು ಗ್ರಾಮೀಣರಿಗೆ ತಲುಪಿಸುವಲ್ಲಿ ಗ್ರಾಮ ಪಂಚಾಯಿತಿಗಳು ವಿಫಲವಾಗಿವೆ.

ಬಾಪೂಜಿ ಸೇವಾ ಕೇಂದ್ರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಗೆ ಸಂಬಂಧಿಸಿದ 43 ಸೇವೆಗಳು, ಕಂದಾಯ ಇಲಾಖೆಯ 40 ಹಾಗೂ ಇತರೆ 17 ವಾಣಿಜ್ಯ ಸೇವೆಗಳು ಸೇರಿದಂತೆ ಒಟ್ಟು 100 ಸರ್ಕಾರಿ ಸೌಲಭ್ಯಗಳು ಗ್ರಾಮೀಣ ಜನರಿಗೆ ದೊರಕುತ್ತವೆ. ಕೇವಲ ಕಾಟಾಚಾರಕ್ಕೆ ಪಂಚಾಯಿತಿ ಆವರಣದ ಒಂದು ಕೋಣೆಯಲ್ಲಿ ಬಾಪೂಜಿ ಸೇವಾಕೇಂದ್ರ ಎಂದು ನಾಮಫಲಕ ಬರೆದು 2 ಕುರ್ಚಿ ಹಾಕಲಾಗಿದೆ. ನಿರ್ವಹಣೆ ಮಾಡಲು ಸಿಬ್ಬಂದಿ ಇಲ್ಲ.

ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಸಣ್ಣ ಮತ್ತು ಅತಿ ಸಣ್ಣ ಹಿಡುವಳಿದಾರರ ದೃಢೀಕರಣ ಪತ್ರ, ಕೃಷಿ ಕಾರ್ಮಿಕ ದೃಢೀಕರಣ ಪತ್ರ, ಆಧಾರ್‌ ತಿದ್ದುಪಡಿ, ಜಮೀನಿನ ಪಹಣಿ ಪತ್ರಗಳ ವಿತರಣೆ ಸೇರಿದಂತೆ ಮುಂತಾದ ಅಗತ್ಯ ದಾಖಲೆ ಪತ್ರಗಳನ್ನು ಗ್ರಾಮ ಪಂಚಾಯಿತಿಗಳಲ್ಲಿಯೇ ನೀಡುವ ವ್ಯವಸ್ಥೆ ಜಾರಿಯಲ್ಲಿದೆ. ಆದರೆ ಪಂಚಾಯಿತಿ ಅಧಿಕಾರಿ ಹಾಗೂ ಸಿಬ್ಬಂದಿ ನಿರಾಸಕ್ತಿಯಿಂದ ಗ್ರಾಮೀಣ ಭಾಗದ ಜನರು ಕೆಲಸ ಕಾರ್ಯ ಬಿಟ್ಟು ತಹಸೀಲ್ದಾರ್‌ ಕಚೇರಿಗೆ ಅಲೆಯುವಂತಾಗಿದೆ.

ಬಾಪೂಜಿ ಸೇವಾ ಕೇಂದ್ರದ ಸಮರ್ಪಕ ಉಪಯೋಗದ ಬಗ್ಗೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮಗಳಲ್ಲಿ ಡಂಗುರ ಸಾರಬೇಕು ಮತ್ತು ಅಲ್ಲಿಯ ಅಧ್ಯಕ್ಷರು ಸದಸ್ಯರುಗಳು ತಮ್ಮ ವಾರ್ಡ್‌ಗಳಲ್ಲಿ ಜನರಿಗೆ ಕೇಂದ್ರದ ಬಗ್ಗೆ ಮಾಹಿತಿ ನೀಡಬೇಕು ಎಂದು ತಾಲ್ಲೂಕು ಜೈಕರವೇ ಅಧ್ಯಕ್ಷ ಸುರೇಶ್ ಅವಟೆ ಹಾಗೂ ಮಾಜಿ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ರಾಜಕುಮಾರ್ ಬಡದಾಳ ಆಗ್ರಹಿಸಿದರು.

ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮನೆ ಮನೆಗೆ ತೆರಳಿ ಬಾಪೂಜಿ ಸೇವಾ ಕೇಂದ್ರದ ಉಪಯುಕ್ತತೆ ಬಗ್ಗೆ ತಿಳಿಸಿಕೊಡಬೇಕು. ಆಧಾರ್‌ ತಿದ್ದುಪಡಿ, ಪಹಣಿ ವಿತರಣೆಯಂತಹ ಸಮಸ್ಯೆಗಳನ್ನು ಗ್ರಾಮ ಪಂಚಾಯಿತಿ ಕಚೇರಿಯಲ್ಲಿಯೇ ಬಗೆಹರಿಸಬೇಕು. ಬಾಪೂಜಿ ಸೇವಾ ಕೇಂದ್ರದಲ್ಲಿ ದೊರೆಯುವ ಸೇವಾ ಸೌಲಭ್ಯಗಳ ಮಾಹಿತಿ ಫಲಕಗಳನ್ನು ಎಲ್ಲಾ ಪಂಚಾಯ್ತಿ ಕಚೇರಿ ಆವರಣದಲ್ಲಿ ಅಳವಡಿಸುವುದನ್ನು ಕಡ್ಡಾಯಗೊ ಳಿಸಿದ್ದರೂ, ಪಂಚಾಯಿತಿಗಳು ಸೌಲಭ್ಯಗಳ ಮಾಹಿತಿ ಫಲಕಗಳನ್ನು ತೂಗಿ ಹಾಕಿಲ್ಲ ಎಂದು ಗೌರ (ಬಿ) ಗ್ರಾಮದ ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷ ಭೀಮರಾವ್ ಗೌರ ಹೇಳುತ್ತಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT