ಅಫಜಲಪುರ: ಕರಜಗಿ ಗ್ರಾಮದಲ್ಲಿ ರಸ್ತೆ ವಿಸ್ತರಣೆ ನೆಪದಲ್ಲಿ ಬಡವರ ಮನೆಗಳನ್ನು ನೆಲಸಮ ಮಾಡಲಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲ್ಲೂಕು ಘಟಕದ ಪದಾಧಿಕಾರಿಗಳು ತಹಶೀಲ್ದಾರ್ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.

ರಾಜ್ಯ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಾಂತೇಶ ಜಮಾದಾರ ಮಾತನಾಡಿ, ಲೋಕೋಪಯೋಗಿ ಇಲಾಖೆಯು ಏಕಾಏಕಿ, ಮಾಹಿತಿ ನೀಡದೆ ರಸ್ತೆ ವಿಸ್ತರಣೆ ನೆಪದಲ್ಲಿ ಬಡವರ ಮನೆಗಳನ್ನು ನೆಲಸಮ ಮಾಡುತ್ತಿದೆ. ಇದರಿಂದ ಬಡವರು ಬೀದಿಗೆ ಬರುವ ಸ್ಥಿತಿ ನಿರ್ಮಾಣವಾಗಿದೆ’ ಎಂದು ಆರೋಪಿಸಿದರು.

‘ಬಡವರು ಸಾಲ ಸೋಲ ಮಾಡಿ ಮನೆ ಕಟ್ಟಿಕೊಂಡಿದ್ದಾರೆ. ಅವುಗಳನ್ನು ಹೀಗೆ ಹಾಳು ಮಾಡಿದರೆ ಅವರು ಎಲ್ಲಿಗೆ ಹೋಗಬೇಕು. ಆದ್ದರಿಂದ ತಹಶೀಲ್ದಾರ್ರು ಸಂಬಂಧಿಸಿದ ಇಲಾಖೆಗಳಿಂದ ಮಾಹಿತಿ ಪಡೆದು ಬಡವರಿಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕು’ ಎಂದು ಆಗ್ರಹಿಸಿದರು.

ರಾಜ್ಯ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಮಂಜುನಾಥ ನಾಯ್ಕೋಡಿ ಮಾತನಾಡಿ, ‘ಯಾವುದೇ ಮಾಹಿತಿ ನೀಡದೆ ಬಡವರ ಮನೆಗಳನ್ನು ಹಾಳು ಮಾಡುವುದು ಸರಿಯಲ್ಲ. ಮನೆ ಕಳೆದುಕೊಂಡವರಿಗೆ ಬೇರೆ ಕಡೆ ನಿವೇಶನ ಗುರುತಿಸಿ ಸರ್ಕಾರದ ವಸತಿ ಯೋಜನೆ ಅಡಿಯಲ್ಲಿ ಮನೆಗಳನ್ನು ನಿರ್ಮಿಸಿಕೊಡಬೇಕು’ ಎಂದು ಒತ್ತಾಯಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಶೈಲ ಗೋಳೆ, ಗ್ರಾಮ ಘಟಕದ ಅಧ್ಯಕ್ಷ ಅಬ್ದುಲ್ ಗುತ್ತೇದಾರ, ಕರವೇ ಅಧ್ಯಕ್ಷ ಸೋಮು ನಾಯ್ಕೋಡಿ, ಚಿಂಚೋಳಿ ಗ್ರಾಮ ಘಟಕದ ಅಧ್ಯಕ್ಷ ಪ್ರಶಾಂತ್ ರಾಜ್ಯಗೋಳ, ಖಾಸಿಂ ಚೌದರಿ, ಮಹಮ್ಮದ್ ಸಾಬ್ ಚೌದರಿ ಸೇರಿದಂತೆ ಅನೇಕರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-31-1989464182

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.