ಅಫಜಲಪುರ: ಪಟ್ಟಣದ ಸೋಲಾಪುರ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಸುಮಾರು 8 ಎಕರೆಯಲ್ಲಿ 2015ರಲ್ಲಿ ಚಾಲನೆ ನೀಡಲಾದ ತಾಲ್ಲೂಕು ಕ್ರೀಡಾಂಗಣ ನಿರ್ಮಾಣ ಕಾರ್ಯವು 12 ವರ್ಷ ಕಳೆದರೂ ಮುಗಿಯದಿರುವುದು ಕ್ರೀಡಾಪಟುಗಳಲ್ಲಿ ನಿರಾಸೆ ಮೂಡಿಸಿದೆ.

ಈ ಹಿಂದೆ ನಿರ್ಮಾಣವಾಗಿರುವ ಕ್ರೀಡಾಂಗಣದ ಕಟ್ಟಡ ಹಾಳಾಗಿ ಹೋಗುತ್ತಿದ್ದು, ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಕ್ರೀಡಾಕೂಟಗಳನ್ನು ಶಾಲೆ–ಕಾಲೇಜುಗಳು, ಗುಡಿ–ಗುಂಡಾರಗಳ ಮೈದಾನದಲ್ಲಿ ನಡೆಸಬೇಕಾದ ಪರಿಸ್ಥಿತಿ ಬಂದಿದೆ.

ಕ್ರೀಡಾಂಗಣದಲ್ಲಿರುವ ಎಲ್ಲಾ ಕಟ್ಟಡಗಳು, ಮಳಿಗೆಗಳು ಹಾಳಾಗಿ ಹೋಗಿವೆ. ಅಲ್ಲಲ್ಲಿ ಕಟ್ಟಡ ಬಿರುಕು ಬಿಟ್ಟಿದೆ. ಅಲ್ಲದೆ ಮುಖ್ಯ ಕಟ್ಟಡದಲ್ಲಿ ಕುಟುಂಬವೊಂದು ವಾಸವಾಗಿದ್ದು, ಜಾನುವಾರುಗಳನ್ನು ಕಟ್ಟಲಾಗುತ್ತಿದೆ. ಹೀಗಾಗಿ ಕ್ರೀಡಾಂಗಣ ಸದ್ಯಕ್ಕೆ ದನದ ಕೊಟ್ಟಿಗೆಯಾಗಿದೆ.

ಇಷ್ಟೆಲ್ಲಾ ಅವ್ಯವಸ್ಥೆ ಕಂಡುಬಂದರೂ ತಾಲ್ಲೂಕಿನ ಸಂಬಂಧಪಟ್ಟ ಅಧಿಕಾರಿಗಳು ಇದರ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಕ್ರೀಡಾಂಗಣಕ್ಕೆ ಸಂಚರಿಸುವ ರಸ್ತೆ ವ್ಯಾಜ್ಯದಲ್ಲಿದೆ. ಹೀಗಾಗಿ ಕ್ರೀಡಾಂಗಣಕ್ಕೆ ತೆರಳಲು ತೊಂದರೆಯಾಗುತ್ತಿದೆ.

‘ಎರಡು ವರ್ಷಗಳಿಂದ ತಾಲ್ಲೂಕು ಆಡಳಿತವು ಹಾಳಾಗಿರುವ ಕ್ರೀಡಾಂಗಣವನ್ನು ಬಳಸಿಕೊಂಡು ಕಾರ್ಯಕ್ರಮಗಳನ್ನು ಮಾಡುತ್ತಿದೆ. ಕಾರ್ಯಕ್ರಮಗಳು ಇದ್ದಾಗ ಮಾತ್ರ ಕ್ರೀಡಾಂಗಣಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ತಾತ್ಕಾಲಿಕ ಸೌಲಭ್ಯವನ್ನು ಕಲ್ಪಿಸಿ ಕಾರ್ಯಕ್ರಮ ಮಾಡಿಕೊಂಡು ಹೋಗುತ್ತಾರೆ ಬಿಟ್ಟರೆ ಶಾಶ್ವತ ಪರಿಹಾರಕ್ಕೆ ಮುಂದಾಗುತ್ತಿಲ್ಲ’ ಎನ್ನುತ್ತಾರೆ ಶಾಲಾ–ಕಾಲೇಜುಗಳು ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಕ್ರೀಡಾ ವಿದ್ಯಾರ್ಥಿಗಳು.

‘ಕ್ರೀಡಾಂಗಣದ ಕಾಮಗಾರಿ ಈವರೆಗೂ ಪೂರ್ಣಗೊಂಡಿಲ್ಲ. ಅನುದಾನ ಮಾತ್ರ ಸಾಕಷ್ಟು ಖರ್ಚು ಮಾಡಲಾಗಿದೆ. ಅಧಿಕಾರಿಗಳ ಮತ್ತು ಜನ ಪ್ರತಿನಿಧಿಗಳ ನಿರ್ಲಕ್ಷ್ಯವೇ ಇದಕ್ಕೆ ಕಾರಣವಾಗಿದೆ. ಕ್ರೀಡಾಂಗಣ ಇಲ್ಲದಿರುವುದರಿಂದ ಸಾಕಷ್ಟು ಕ್ರೀಡಾಪಟುಗಳಿಗೆ ತೊಂದರೆಯಾಗುತ್ತಿದೆ. ಇಲ್ಲಿ ಕುಡಿಯಲು ನೀರಿಲ್ಲ, ಮಳೆ ಬಂದರೆ ಆಸರೆ ಇಲ್ಲ ಮತ್ತು ಶೌಚಾಲಯ ವ್ಯವಸ್ಥೆ ಇಲ್ಲ’ ಎಂದು ದೈಹಿಕ ಶಿಕ್ಷಣದ ಪದವೀಧರರಾದ ಧಾನು ಪತಾಟೆ ಹಾಗೂ ಕ್ರೀಡಾಪಟು ಲಕ್ಷ್ಮಣ ಹರಳಯ್ಯ ಹೇಳಿದರು.

‘ಸುಮಾರು ₹4 ಕೋಟಿ ವೆಚ್ಚದಲ್ಲಿ ತಾಲ್ಲೂಕು ಕ್ರೀಡಾಂಗಣ ನಿರ್ಮಾಣ ಕಾಮಗಾರಿಗೆ ಈ ಹಿಂದೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿದ್ದ ನಿತಿನ್ ಗುತ್ತೇದಾರ ಚಾಲನೆ ನೀಡಿದ್ದರು. ಆದರೆ, ಅನುದಾನದ ಕೊರತೆಯಿಂದ ಅತ್ತ ಕ್ರೀಡಾಂಗಣ ಕಾಮಗಾರಿ ಮುಗಿಯದೆ ಇತ್ತ ಈಗಾಗಲೇ ನಿರ್ಮಾಣ ಮಾಡಿರುವ ಕಟ್ಟಡಗಳು ಸಹ ಹಾಳಾಗಿ ಹೋಗುತ್ತಿದೆ. ಇದರ ಮಧ್ಯೆ ಭೂಸೇನೆ ನಿಗಮದವರಿಗೆ ಕ್ರೀಡಾಂಗಣದ ಕಾಮಗಾರಿಯನ್ನು ಗುತ್ತಿಗೆ ನೀಡಲಾಗಿದ್ದು, ಅವರೂ ಅರೆಬರೆ ಕೆಲಸ ಮಾಡಿ ಅನುದಾನ ಎತ್ತಿಹಾಕಿದ್ದಾರೆ’ ಎಂದು ಕ್ರೀಡಾಪಟುಗಳು ಆಪಾದಿಸುತ್ತಾರೆ.

‘ನಾನು ಪ್ರಭಾರಿಯಾಗಿ ಕೆಲಸ ಮಾಡುತ್ತೇನೆ. ನನಗೆ ಯಾವುದರ ಬಗ್ಗೆಯೂ ಮಾಹಿತಿ ಇಲ್ಲ. ಆದರೆ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ ಅನುದಾನ ನೀಡಲಾಗುತ್ತಿದೆ ಎಂಬ ಸುದ್ದಿ ಕೇಳಿದ್ದೇನೆ. ಅನುದಾನ ಬಿಡುಗಡೆಯಾದರೆ ಕ್ರೀಡಾಂಗಣದ ಉಳಿದ ಕೆಲಸ ಕಾರ್ಯಗಳನ್ನು ಮಾಡಲಾಗುತ್ತದೆ’ ಎಂದು ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕ ಸಂಗಮೇಶ್ವರ ತಿಳಿಸಿದರು.

ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ನಿರ್ಲಕ್ಷ್ಯವೇ ತಾಲ್ಲೂಕು ಕ್ರೀಡಾಂಗಣ ಹಾಳಾಗುತ್ತಿರುವುದಕ್ಕೆ ಕಾರಣ. ಇದರ ಬಗ್ಗೆ ಸಂಬಂಧಪಟ್ಟ ಮೇಲಧಿಕಾರಿಗಳು ಗಮನಹರಿಸಬೇಕು

-ಧಾನು ಪತಾಟೆ, ದೈಹಿಕ ಶಿಕ್ಷಣ ಪದವೀಧರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.