ಅಫಜಲಪುರ: ಇಲ್ಲಿನ ಗ್ರೇಡ್–2 ತಹಶೀಲ್ದಾರ್ ತಳವಾರರಿಗೆ ಪರಿಶಿಷ್ಟ ಪಂಗಡ ಜಾತಿ ಪ್ರಮಾಣ ಪತ್ರ ನೀಡುತ್ತಿಲ್ಲ. ಅಲ್ಲದೆ ಈ ಕುರಿತು ಸರಿಯಾಗಿ ಮಾಹಿತಿಯನ್ನೂ ನೀಡುತ್ತಿಲ್ಲ. ಗ್ರೇಡ್–2 ತಹಶೀಲ್ದಾರ್ ಅವರನ್ನು ತಕ್ಷಣ ಅಮಾನತು ಮಾಡುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ಮಹರ್ಷಿ ವಾಲ್ಮೀಕಿ ತಳವಾರ ಸಮಾಜ ಸಂಘದಿಂದ ತಹಶೀಲ್ದಾರ್ ಕಚೇರಿ ಮುಂದೆ ಬುಧವಾರ ಅಹೋರಾತ್ರಿ ಧರಣಿ ಕೈಗೊಂಡರು.

ಧರಣಿ ಸ್ಥಳಕ್ಕೆ ತಹಶೀಲ್ದಾರ್, ಡಿವೈಎಸ್ಪಿ, ಸಿಪಿಐ ಹಾಗೂ ಪಿಎಸ್ಐ ಆಗಮಿಸಿ ಧರಣಿ ಸತ್ಯಾಗ್ರಹ ಹಿಂಪಡೆಯುವಂತೆ ಮನವೊಲಿಸಿದರು ಸಾಧ್ಯವಾಗಲಿಲ್ಲ. ಪ್ರತಿಭಟನಕಾರರು ಧರಣಿ ಮುಂದುವರೆಸಿದರು.

ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸಂತೋಷ ತಳವಾರ ಮಾತನಾಡಿ, ನೈಜ ತಳವಾರ ಸಮಾಜಕ್ಕೆ ಎಸ್ಟಿ ಪ್ರಮಾಣ ಪತ್ರ ನೀಡಬೇಕು. ಹೈಕೋರ್ಟ್ ಮಧ್ಯಂತರ ಆದೇಶದಂತೆ ಶಾಲಾ ದಾಖಲಾತಿಯ ವರ್ಗಾವಣೆ ಪ್ರಮಾಣ ಪತ್ರದಲ್ಲಿ ಹಿಂದೂ ತಳವಾರ ಎಂದು ಇದ್ದರೆ ಮತ್ತು ಪಂಚನಾಮ ವರದಿಗಳ ಪ್ರಕಾರ ತಳವಾರ ಜಾತಿ ಜನರಿಗೆ ಪರಿಶಿಷ್ಟ ಪಂಗಡ ಪ್ರಮಾಣ ಪತ್ರ ನೀಡಬೇಕು ಎಂದು ಆಗ್ರಹಿಸಿದರು.

ಹೈಕೋರ್ಟ್ನಲ್ಲಿ ಪ್ರಕರಣ ಬಾಕಿ ಇದೆ. ಆದರೆ ನೈಜ ತಳವಾರ ಜಾತಿಯವರಿಗೆ ತೊಂದರೆ ಆಗದಂತೆ ಪರಿಶಿಷ್ಟ ಪಂಗಡ ಜಾತಿ ಪ್ರಮಾಣ ಪತ್ರ ನೀಡಬೇಕು ಎಂದು ಮಧ್ಯಂತರ ಆದೇಶ ನೀಡಿದೆ. ಅದನ್ನು ಅಧಿಕಾರಿಗಳು ಪಾಲಿಸದೆ ನ್ಯಾಯಾಲಯದ ನಿಂದನೆ ಮಾಡುತ್ತಿದ್ದಾರೆ. ತಾಲ್ಲೂಕಿನ ಗ್ರೇಡ್–2 ತಹಶೀಲ್ದಾರ್ ಒಂದು ವರ್ಷದಿಂದ ನೈಜ ತಳವಾರ ಜಾತಿಗೆ ಪ್ರಮಾಣಪತ್ರ ನೀಡುವುದನ್ನು ತಡೆಹಿಡಿದು ತೊಂದರೆ ನೀಡುತ್ತಿದ್ದಾರೆ’ ಎಂದು ಆರೋಪಿಸಿದರು.

ತಾಲ್ಲೂಕಿನ ಗ್ರೇಡ್–2 ತಹಶೀಲ್ದಾರ್ ಅವರನ್ನು ತಕ್ಷಣ ಅಮಾನತು ಮಾಡಬೇಕು. ನೈಜ ತಳವಾರ ಸಮುದಾಯದ ಜನರಿಗೆ ಪರಿಶಿಷ್ಟ ಪಂಗಡ ಪ್ರಮಾಣಪತ್ರ ನೀಡಬೇಕು ಎಂದು ಆಗ್ರಹಿಸಿದರು.

ಧರಣಿ ಸತ್ಯಾಗ್ರಹದಲ್ಲಿ ತಳವಾರ ಸಮಾಜದ ಮುಖಂಡರಾದ ರಾಜೇಂದ್ರ ರಾಜೋಳ,ನಾಗರಾಜ ನಂದೂರ, ಗುರುನಾಥ ಹಾವನೂರು, ಯಲ್ಲಾಲಿಂಗ ತಳವಾರ, ಗುರುಬಾಯಿ ಪ್ಯಾಟಿ, ಲಕ್ಷ್ಮೀಬಾಯಿ ಚೌಡಾಪುರ, ಸುಮಿತ್ರ ಹಸರಗುಂಡಗಿ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-31-1243845301

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.