ಅಫಜಲಪುರ: ತಳವಾರ ಸಮಾಜಕ್ಕೆ ಪರಿಶಿಷ್ಟ ಪಂಗಡ ಜಾತಿ ಪ್ರಮಾಣ ಪತ್ರ ನೀಡದ ಗ್ರೇಡ್–2 ತಹಶೀಲ್ದಾರ್ ಅವರನ್ನು ಅಮಾನತು ಮಾಡುವಂತೆ, ಎಸ್ಟಿ ಪ್ರಮಾಣಪತ್ರ ನೀಡುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ಮಹರ್ಷಿ ವಾಲ್ಮೀಕಿ ತಳವಾರ ಸಮಾಜದ ತಾಲ್ಲೂಕು ಘಟಕದಿಂದ ನಡೆದ ಧರಣಿ ಶುಕ್ರವಾರ ಮುಂದುವರೆಯಿತು.

ತಹಶೀಲ್ದಾರ್ ಕಚೇರಿ ಎದುರು ಕಳೆದ ಮೂರು ದಿನಗಳಿಂದ ಧರಣಿ ಸತ್ಯಾಗ್ರಹ ಮಾಡುತ್ತಿದ್ದರೂ ತಹಶೀಲ್ದಾರ್ ಕಚೇರಿಯಿಂದ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಆರೋಪಿಸಿ ಪ್ರತಿಭಟನಕಾರರು ಶುಕ್ರವಾರ ತಹಶೀಲ್ದಾರ್ ಕಚೇರಿಗೆ ಬೀಗ ಹಾಕಿ ಪ್ರತಿಭಟಿಸಿದರು. ಪೊಲೀಸರು ಮಧ್ಯಪ್ರವೇಶಿಸಿ ಪ್ರತಿಭಟನಕಾರರನ್ನು ಬಂಧಿಸಿ, ಪೊಲೀಸ್ ವಾಹನದಲ್ಲಿ ಠಾಣೆಗೆ ಕರೆದುಕೊಂಡು ಹೋಗಿ ನಂತರ ಬಿಡುಗಡೆಗೊಳಿಸಿದರು.

ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸಂತೋಷ ತಳವಾರ ಮಾತನಾಡಿ, ‘ಹೈಕೋರ್ಟ್ನಲ್ಲಿ ಪ್ರಕರಣ ಬಾಕಿ ಇದೆ. ಆದರೆ ನೈಜ ತಳವಾರ ಜಾತಿಯವರಿಗೆ ಎಸ್ಟಿ ಪ್ರಮಾಣ ಪತ್ರ ನೀಡಬೇಕು ಎಂದು ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ಶಾಲಾ ದಾಖಲಾತಿಯ ವರ್ಗಾವಣೆ ಪ್ರಮಾಣ ಪತ್ರದಲ್ಲಿ, ಪಂಚನಾಮೆಯಲ್ಲಿ ಹಿಂದೂ ತಳವಾರ ಎಂದು ಇದ್ದರೆ ಎಸ್ಟಿ ಪ್ರಮಾಣ ಪತ್ರ ನೀಡಬೇಕು ಎಂದು ಹೇಳಿದೆ. ನಮಗೆ ಎಸ್ಟಿ ಪ್ರಮಾಣಪತ್ರ ನೀಡುವವರೆಗೆ ಹೋರಾಟ ಮುಂದುವರೆಯಲಿದೆ’ ಎಂದರು.

ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಅನವಶ್ಯಕವಾಗಿ ಬಲಪ್ರಯೋಗ ಮಾಡಿದ್ದಾರೆ ಎಂದು ಆರೋಪಿಸಿದರು. ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಮತ್ತು ತಳವಾರ ಸಮುದಾಯಕ್ಕೆ ಜಾತಿ ಪ್ರಮಾಣಪತ್ರ ಸಂಬಂಧಿತ ಸಮಸ್ಯೆಗಳಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

ಧರಣಿ ಸತ್ಯಾಗ್ರಹದಲ್ಲಿ ತಳವಾರ ಸಮಾಜದ ರಾಜೇಂದ್ರ ರಾಜೋಳ, ಭೋಗೇಶ ತಳವಾರ, ಮಾಂತೇಶ್ ಗೌರ, ಶರಣು ದಿವಾನಜಿ, ಪ್ರೇಮ್ ಗಾಣಗಾಪುರ, ಅಶೋಕ ಕಂಕಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-31-61068070

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.