ಅಫಜಲಪುರ: ‘ರಾಜ್ಯ ಸರ್ಕಾರಗಳಿಗೆ ವಹಿಸಲಾಗಿರುವ ವಿವಿಧ ಕಾರ್ಯಗಳ ಪೈಕಿ, ನಗರ ಯೋಜನೆ ಮತ್ತು ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳುವ ಪಾತ್ರವು ನಿರ್ಣಾಯಕವಾಗಿದೆ. ಇದು ನಗರದ ಸರ್ವಾಂಗೀಣ ಅಭಿವೃದ್ಧಿಯನ್ನು ರೂಪಿಸುತ್ತದೆ. ಮೂಲಸೌಲಭ್ಯ ಅಭಿವೃದ್ಧಿ, ವಸತಿ, ಸಾರಿಗೆ ಮತ್ತು ಸಂಪರ್ಕ ಮುಂತಾದ ಕ್ಷೇತ್ರಗಳನ್ನು ಕೇಂದ್ರೀಕರಿಸುತ್ತದೆ’ ಎಂದು ಶಾಸಕ ಎಂ.ವೈ.ಪಾಟೀಲ ತಿಳಿಸಿದರು.

ಅಫಜಲಪುರ - ದೇವಲಗಾಣಗಾಪುರ ನಗರ ಯೋಜನೆ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕವಾದ ಚಂದ್ರಶೇಖರ ಕರಜಗಿ ಅವರ ಅಧಿಕಾರಿ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

‘ದೇವಲ ಗಾಣಗಾಪುರ ನಗರ ಯೋಜನೆ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕವಾಗಿರುವ ಚಂದ್ರಶೇಖರ ಕರಜಗಿ ಹಾಗೂ ನಿರ್ದೇಶಕರಾದ ಮಾರುತಿ ಹುಲಿಗೆಪ್ಪ ಮೂರನೆತ್ತಿ, ಗುಂಡಪ್ಪ ಹೊಸಮನಿ ಹಾಗೂ ಮಹಿಬೂಬ್ ಕಪೂರ್ ಸಾಬ್ ಮನಿ ಯಾರ ಎಲ್ಲರೂ ಅನುಭವಿಗಳಾಗಿದ್ದು, ಕ್ರಿಯಾಶೀಲರಾಗಿದ್ದಾರೆ ಹೀಗಾಗಿ ಪ್ರಾಧಿಕಾರದ ಎಲ್ಲಾ ಕೆಲಸ ಕಾರ್ಯಗಳು ವೇಗವಾಗಿ ನಡೆಯುತ್ತವೆ’ ಎಂದು ಹೇಳಿದರು.

ಪ್ರಾಧಿಕಾರದ ನೂತನ ಅಧ್ಯಕ್ಷ ಚಂದ್ರಶೇಖರ ಕರಜಗಿ ಮಾತನಾಡಿ, ‘ಕಾನೂನಿನ ಚೌಕಟ್ಟಿನಲ್ಲಿ ಪ್ರಾಧಿಕಾರದ ವತಿಯಿಂದ ಕೆಲಸ ಕಾರ್ಯಗಳನ್ನು ಮಾಡಲಾಗುವುದು. ಅದರಂತೆ ನಗರ ಪ್ರಾಧಿಕಾರದ ಮೂಲಕ ಯಾವ ಯಾವ ಕೆಲಸಗಳನ್ನು ಮಾಡಲು ಸಾಧ್ಯವಿದೆ ಎಲ್ಲವನ್ನು ಅಚ್ಚುಕಟ್ಟಾಗಿ ಮಾಡಲಾಗುವುದು’ ಎಂದು ತಿಳಿಸಿದರು.

ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಚಂದ್ರಕಾಂತ್ ರೆಡ್ಡಿ ಮಾತನಾಡಿದರು. ಯೋಜನಾ ಆಯೋಗದ ರಾಜ್ಯ ಉಪಾಧ್ಯಕ್ಷ ಬಿ.ಆರ್.ಪಾಟೀಲ, ಕೆಕೆಆರ್ಟಿಸಿ ಅಧ್ಯಕ್ಷ ಅರುಣಕುಮಾರ ಪಾಟೀಲ, ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ ಪೂಜಾರಿ, ಪ್ರಧಾನ ಕಾರ್ಯದರ್ಶಿಗಳಾದ ಶಿವಾನಂದ ಗಾಡಿ ಸೌಕಾರ, ಶರಣು ಕುಂಬಾರ, ಜಿ.ಪಂ ಮಾಜಿ ಸದಸ್ಯ ಮತಿನ್ ಪಟೇಲ, ಮುಖಂಡರಾದ ಶಂಕರ ಸೋಬಾನಿ, ಶ್ರೀಶೈಲ ಪಾಟೀಲ, ಕಾಂತು ಮ್ಯಾಳೆಸಿ, ಶ್ರೀಮಂತ ಬಿರಾದಾರ, ಚಿನ್ನು ಸಾಬ್ ಮನಿಯಾರ ಸೇರಿದಂತೆ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-34-590045030

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.