ಅಫಜಲಪುರ: ‘ವಿಶ್ವಕರ್ಮರು ಈ ನಾಡಿನ ವಾಸ್ತುಶಿಲ್ಪ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರವಾಗಿದೆ ಈ ಸಮುದಾಯ ಕಾಯಕ ಜೀವಿಗಳು ಎಲ್ಲಾ ಸಮುದಾಯದ ಜನರೊಂದಿಗೆ ಉತ್ತಮ ಒಡನಾಟ ಹೊಂದಿದ್ದಾರೆ. ಅಲ್ಲದೇ ರೈತರ ಉಳುಮೆಗೆ ಬೇಕಾದ ಎಲ್ಲಾ ಸಲಕರಣೆಗಳು ಮಾಡಿಕೊಡುತ್ತಾರೆ. ಹೀಗಾಗಿ ವಿಶ್ವಕರ್ಮರು ರೈತರ ಬೆನ್ನಲೆಬಾಗಿದ್ದಾರೆ ಎಂದು ಕೆಪಿಸಿಸಿ ಸದಸ್ಯ ಅರುಣಕುಮಾರ ಎಂ. ಪಾಟೀಲ ತಿಳಿಸಿದರು.

ಪಟ್ಟಣದ ಶೆಟ್ಟಿ ಫಂಕ್ಷನ್ ಹಾಲ್ನಲ್ಲಿ ಹಮ್ಮಿಕೊಂಡ ಶ್ರೀ ಪ್ರಣವ ನಿರಂಜನ ಸ್ವಾಮೀಜಿಯ 25ನೇ ವರ್ಧಂತಿ ರಜತ ಮಹೋತ್ಸವ ಸಮಾರಂಭಕ್ಕೆ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು.

‘ಮಠದ ಅಭಿವೃದ್ಧಿಗೆ ₹ 50 ಲಕ್ಷ ಅನುದಾನ ಕೇಳಿದ್ದಾರೆ ಈ ಕುರಿತು ಶಾಸಕರ ಗಮನಕ್ಕೆ ತಂದು ಅನುದಾನ ಬಿಡುಗಡೆ ಮಾಡುವೆ’ ಎಂದು ಬರವಸೆ ನೀಡಿದರು.

ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಕುಮಾರ ನಾಟೀಕಾರ ಹಾಗೂ ಸಮಾಜ ಸೇವಕ ಜೆ.ಎಂ.ಕೊರಬು ಮಾತನಾಡಿ, ‘ಭಾರತ ದೇಶಕ್ಕೆ ವಿಶ್ವಕರ್ಮರು ಬಹು ದೊಡ್ಡ ಕೊಡುಗೆ ನೀಡಿದ್ದಾರೆ’ ಎಂದರು

ವಿಶ್ವಕರ್ಮ ಸಮಾಜದ ಹಿರಿಯ ಮುಖಂಡರಾದ ಈರಣ್ಣ ಪಂಚಾಳ, ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯರು, ಪ್ರಣವ ನಿರಂಜನ ಸ್ವಾಮೀಜಿ ಹಾಗೂ ಶಹಾಪುರದ ಏಕದಂಡಿಗಮಠದ ಕಾಳಹಸ್ತೇಂದ್ರ ಸ್ವಾಮೀಜಿ, ಸಿಂದಗಿಭೀಮಾಶಂಕರ ಮಠದ ದತ್ತಪ್ಪಯ್ಯ ಸ್ವಾಮೀಜಿ, ಅಫಜಲಪುರದ ವಿಶ್ವಕರ್ಮ ಮೂರುಝಾವಧೀಶ್ವರ ಮಠದ ಮೌನೇಶ್ವರ ಸ್ವಾಮೀಜಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಜಿ.ಪಂ ಮಾಜಿ ಅಧ್ಯಕ್ಷ ನಿತಿನ್ ಗುತ್ತೇದಾರ, ಲೋಹಿತ, ಪ್ರಭಾವತಿ ಮೇತ್ರಿ ಹಾಜರಿದ್ದರು. ವಿವಿಧ ಕ್ಷೇತ್ರಗಳಲ್ಲಿ ಸಾದನಗೈದ ಸಾಧಕರಿಗೆ ಸನ್ಮಾನ ಸಮಾರಂಭ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಶಿಕ್ಷಕರಾದ ಮೌನೇಶ ಬಡಿಗೇರ ಹಾಗೂ ಸೂರ್ಯಕಾಂತ ಬಡಿಗೇರ ನಿರೂಪಿಸಿ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.