ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೇವರ್ಗಿ | ಹಾವು ಕಚ್ಚಿ ಕೃಷಿ ಕಾರ್ಮಿಕ ಸಾವು

Published 25 ಡಿಸೆಂಬರ್ 2023, 14:52 IST
Last Updated 25 ಡಿಸೆಂಬರ್ 2023, 14:52 IST
ಅಕ್ಷರ ಗಾತ್ರ

ಜೇವರ್ಗಿ: ಹೊಲದಲ್ಲಿ ಕೆಲಸ ಮಾಡುತ್ತಿರುವಾಗ ಹಾವು ಕಚ್ಚಿ ಚಿಕಿತ್ಸೆ ಫಲಕಾರಿಯಾಗದೇ ಯುವ ಕೃಷಿ ಕಾರ್ಮಿಕನೊಬ್ಬ ಮೃತಪಟ್ಟಿದ್ದಾನೆ.

ಪಟ್ಟಣದ ಬುಗ್ಗಿ ಬಡಾವಣೆಯ ರಾಜು ರಂಗಪ್ಪ (21) ಮೃತ ಕೃಷಿ ಕಾರ್ಮಿಕ.

ಕಳೆದ 8 ದಿನಗಳ ಹಿಂದೆ ಹೊಲದಲ್ಲಿ ಕೆಲಸ ಮಾಡುವಾಗ ಹಾವು ಕಚ್ಚಿತ್ತು. ಕಲಬುರಗಿ ನಗರದ ಜಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟಿದ್ದಾನೆ. ಯುವಕನ ಕುಟುಂಬಕ್ಕೆ ಯಾವುದೇ ಜಮೀನು ಇಲ್ಲ. ಕೃಷಿ ಕೂಲಿ ಮೇಲೆಯೇ ಇವರ ಜೀವನ ಸಾಗುತ್ತಿತ್ತು. ಯುವಕನ ಸಾವಿನಿಂದ ಕುಟುಂಬ ವರ್ಗ ಸಂಕಷ್ಟಕ್ಕೀಡಾಗಿದೆ.

ಪರಿಹಾರಕ್ಕೆ ಆಗ್ರಹ: ಮೃತ ರಾಜು ಕುಟುಂಬ ಬಡತನದ ವೇದನೆಯಲ್ಲಿದ್ದು, ಸರ್ಕಾರ ₹5 ಲಕ್ಷ ಪರಿಹಾರ ನೀಡಬೇಕು ಎಂದು ಜಯ ಕರ್ನಾಟಕ ಸಂಘಟನೆ ತಾಲ್ಲೂಕು ಘಟಕದ ಅಧ್ಯಕ್ಷ ಸುಧೀಂದ್ರ ಇಜೇರಿ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT