ಶುಕ್ರವಾರ, ಸೆಪ್ಟೆಂಬರ್ 17, 2021
29 °C

ಬಾಲಕಿಯರ ಮೇಲಿನ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಿ: ಬಿಜೆಪಿ ನಾಯಕ ಅಂಬಾರಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ಪಕ್ಕದ ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲ್ಲೂಕಿನ ಗ್ರಾಮವೊಂದರಲ್ಲಿ ಪರಿಶಿಷ್ಟ ಬಾಲಕಿಯರ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಬಿಜೆಪಿ ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷ ಅಂಬಾರಾಯ ಅಷ್ಠಗಿ ಒತ್ತಾಯಿಸಿದ್ದಾರೆ.

ಈ ಪ್ರಕರಣ ನಾಗರಿಕ ಸಮಾಜ ತಲೆ ತಗ್ಗಿಸುವ ವಿಚಾರವಾಗಿದೆ. ಈ ಇಬ್ಬರು ದಲಿತ ಹೆಣ್ಣುಮಕ್ಕಳಿಗೆ ನ್ಯಾಯ ಒದಗಿಸಿ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.

ಅಲ್ಲದೇ, ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಗೋಣಿಬೀಡು ಪೊಲೀಸ್ ಠಾಣೆಯ ಪಿಎಸ್‌ಐ ಕೆ.ಅರ್ಜುನ ಪರಿಶಿಷ್ಟ ಜಾತಿಯ ಯುವಕ ಕೆ.ಎಲ್. ಪುನೀತ ಎಂಬುವರನ್ನು ಠಾಣೆಗೆ ಕರೆಸಿ ಮೂತ್ರ ಕುಡಿಸಿರುವುದು ಅತ್ಯಂತ ಖಂಡನೀಯ. ಯುವಕನನ್ನು ಅಕ್ರಮವಾಗಿ ಬಂಧಿಸಿದ್ದಲ್ಲದೇ ಮನಸೋ ಇಚ್ಛೆ ಥಳಿಸಿರುವುದನ್ನು ನೋಡಿದರೆ ನಾವು ಯಾವ ಸಮಾಜದಲ್ಲಿ ಇದ್ದೇವೆ ಎಂಬ ಆತಂಕ ಮೂಡುತ್ತದೆ. ತಕ್ಷಣ ಪಿಎಸ್‌ಐರನ್ನು ಅಮಾನತಿನಲ್ಲಿರಿಸಬೇಕು. ಬಂಧಿಸಿ ಸೂಕ್ತ ತನಿಖೆ ನಡೆಸಿ ಕಠಿಣ ಶಿಕ್ಷೆ ವಿಧಿಸಬೇಕು. ಇಲ್ಲದಿದ್ದರೆ ರಾಜ್ಯದ ಎಲ್ಲ ದಲಿತ ಸಂಘಟನೆಗಳು ಬೀದಿಗಿಳಿಯುತ್ತವೆ ಎಂದು ಅಷ್ಠಗಿ ಎಚ್ಚರಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು