ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಿಂಗಳಲ್ಲಿ ಎರಡು ಪರೀಕ್ಷೆ ನಡೆಸುವ ನಿರ್ಧಾರಕ್ಕೆ ಎಐಡಿಎಸ್ಓ ಖಂಡನೆ

Last Updated 28 ಜೂನ್ 2021, 6:19 IST
ಅಕ್ಷರ ಗಾತ್ರ

ಕಲಬುರ್ಗಿ: ಒಂದೇ ತಿಂಗಳಲ್ಲಿ ಎರಡು ಪದವಿ ಸೆಮಿಸ್ಟರ್ ಪರೀಕ್ಷೆ ನಡೆಸುವ ‌ನಿರ್ಧಾರವನ್ನು‌ ಹಿಂದಕ್ಕೆ ಪಡೆಯಬೇಕು ಎಂದು ಒತ್ತಾಯಿಸಿ ಅಖಿಲ ಭಾರತ ‌ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್ಓ) ನೇತೃತ್ವದಲ್ಲಿ ಪದವಿ ವಿದ್ಯಾರ್ಥಿಗಳು ಇಲ್ಲಿನ ವಿ.ವಿ. ಕಾರ್ಯಸೌಧದ ಎದುರು ಪ್ರತಿಭಟನೆ ನಡೆಸಿದರು.

ಪ್ರಸಕ್ತ ಸೆಮಿಸ್ಟರ್ ನ ಪರೀಕ್ಷೆಯನ್ನು ಅಚ್ಚುಕಟ್ಟಾಗಿ ‌ನಡೆಸಬೇಕು. ಪದವಿ, ಎಂಜಿನಿಯರಿಂಗ್, ಡಿಪ್ಲೊಮಾ, ಫಾರ್ಮಸಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಕಳೆದ ಸೆಮಿಸ್ಟರ್ ಪರೀಕ್ಷೆ ನಡೆಸುವ ‌ಬದಲು ಆಂತರಿಕ ‌ಮೌಲ್ಯಮಾಪನ ಅಥವಾ ಇನ್ನಾವುದಾದರೂ ವೈಜ್ಞಾನಿಕ ಮಾನದಂಡದ ಮೂಲಕ ಮೌಲ್ಯಮಾಪನ ‌ಮಾಡಬೇಕು. ಶಿಕ್ಷಣ ತಜ್ಞರು, ಉಪನ್ಯಾಸಕರು, ಪೋಷಕರು ಹಾಗೂ ವಿದ್ಯಾರ್ಥಿಗಳೊಂದಿಗೆ ಚರ್ಚೆ ‌ನಡೆಸಿ ಶೈಕ್ಷಣಿಕ ವೇಳಾಪಟ್ಟಿ, ಪರೀಕ್ಷೆ, ಮೌಲ್ಯಮಾಪನ ಇವುಗಳ ಬಗ್ಗೆ ವೈಜ್ಞಾನಿಕ ನೀತಿಯನ್ನು ರೂಪಿಸಬೇಕು. ಆಫ್ ಲೈನ್ ತರಗತಿಗಳು ಆರಂಭವಾಗುವ ‌ಮುನ್ನ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಲಸಿಕೆ ನೀಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಹಣಮಂತ ಎಚ್.ಎಸ್, ಕಾರ್ಯದರ್ಶಿ ಈರಣ್ಣ ಇಸಬಾ, ಉಪಾಧ್ಯಕ್ಷೆ ಸ್ನೇಹಾ ಕಟ್ಟಿಮನಿ, ಶಿಲ್ಪಾ ಬಿ.ಕೆ., ಗೋದಾವರಿ, ಪೂಜಾ, ವೆಂಕಟೇಶ, ಭೀಮು ಪ್ರತಿಭಟನೆಯಲ್ಲಿ ‌ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT