ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ನವೆಂಬರ್‌ ಮಧ್ಯಭಾಗದಲ್ಲಿ ವಿಮಾನ ನಿಲ್ದಾಣ ಕಾರ್ಯಾರಂಭ’

Last Updated 25 ಅಕ್ಟೋಬರ್ 2019, 9:21 IST
ಅಕ್ಷರ ಗಾತ್ರ

ಕಲಬುರ್ಗಿ: ಈ ಭಾಗದ ಜನತೆಯ ಬಹು ನಿರೀಕ್ಷಿತ ಕಲಬುರ್ಗಿ ವಿಮಾನ ನಿಲ್ದಾಣ ನವೆಂಬರ್‌ ಮಧ್ಯಭಾಗದಿಂದ ಕಾರ್ಯಾರಂಭ ಮಾಡಲಿದೆ ಎಂದು ಸಂಸದ ಡಾ.ಉಮೇಶ ಜಾಧವ ಹೇಳಿದರು.

ನವದೆಹಲಿಯಲ್ಲಿ ಗುರುವಾರ ನಾಗರಿಕ ವಿಮಾನಯಾನ ಸಚಿವಾಲಯದ ಕಾರ್ಯದರ್ಶಿ ಪ್ರದೀಪ ಸಿಂಗ್‌ ಖರೋಲಾ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಆದಷ್ಟು ಬೇಗನೇ ನಿಲ್ದಾಣ ಆರಂಭಿಸುವ ಕುರಿತು ಮಾತುಕತೆ ನಡೆಸಿದರು.

ವಿವಿಧ ಇಲಾಖೆಗಳ ಅನುಮತಿ ಪಡೆಯಲು ಕೊಂಚ ವಿಳಂಬವಾಗಿದೆ. ಈಗಾಗಲೇ ಶೇ 90ರಷ್ಟು ಕಾಮಗಾರಿಗಳು ಮುಕ್ತಾಯವಾಗಿವೆ. ನವೆಂಬರ್‌ 1ರ ರಾಜ್ಯೋತ್ಸವ ದಿನದಂದು ವಿಮಾನ ನಿಲ್ದಾಣ ಕಾರ್ಯಾರಂಭ ಮಾಡಲು ನಿರ್ಧರಿಸಲಾಗಿತ್ತು. ಆದರೆ, ನವೆಂಬರ್ ಮಧ್ಯಭಾಗದಲ್ಲಿ ವಿಮಾನಗಳು ಹಾರಲಿವೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT