ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುತ್ತಿಗೆ ಸಿಬ್ಬಂದಿಗೆ ವೇತನ ನೀಡಲು ಒತ್ತಾಯ

Last Updated 7 ನವೆಂಬರ್ 2020, 1:46 IST
ಅಕ್ಷರ ಗಾತ್ರ

ಕಲಬುರ್ಗಿ: ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಗೊಳಪಡುವ ರಾಜ್ಯದ ಎಲ್ಲ ಪದವಿ ಮತ್ತು ಸ್ನಾತಕೋತ್ತರ ಕಾಲೇಜುಗಳಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ (ಸಿ.ಡಿ.ಸಿ.), ಗುತ್ತಿಗೆ, ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಡೇಟಾ ಎಂಟ್ರಿ ಆಪರೇಟರ್ ಹಾಗೂ ಗ್ರೂಪ್ ಡಿ ಸಿಬ್ಬಂದಿಗೆ ಕನಿಷ್ಠ ವೇತನ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕರ ರಾಜ್ಯ ಉನ್ನತ ಶಿಕ್ಷಣ ಇಲಾಖೆ ಕಾಲೇಜುಗಳ ಕಾರ್ಮಿಕರ ಸಂಘ ಹಾಗೂ ಎಐಯುಟಿಯುಸಿ ಕಾರ್ಮಿಕ ಸಂಘಟನೆ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಇಲಾಖೆಯ ವಿವಿಧೆಡೆ ಎರಡು ಸಾವಿರಕ್ಕೂ ಅಧಿಕ ಸಿಬ್ಬಂದಿ ಸುಮಾರು 15 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ಅವರಿಗೂ ಕನಿಷ್ಠ ವೇತನ ಸಿಕ್ಕಿಲ್ಲ. ಬಹುತೇಕ ಮಹಿಳಾ ಕಾರ್ಮಿಕರಿದ್ದು ತಮ್ಮ ಸೇವೆ ಕಾಯಂ ಆಗಬಹುದು ಎಂಬ ನಿರೀಕ್ಷೆಯಲ್ಲಿ ಕೆಲಸ ಮಾಡುತ್ತಿದ್ದಾರೆ.

ಸಿ.ಡಿ.ಸಿ ಹೆಸರಿನಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ನಿಯಮಾನುಸಾರ ಕನಿಷ್ಠ ವೇತನ ನೀಡಬೇಕು ಎಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತರು ಎಲ್ಲ ಕಾಲೇಜುಗಳ ಪ್ರಾಂಶುಪಾಲರಿಗೆ ಸುತ್ತೋಲೆಯ ಮೂಲಕ ತಿಳಿಸಲಾಗಿದೆ. ಆದರೆ, ಕೆಲವು ಪ್ರಾಂಶುಪಾಲರು ತಾವು ನೀಡುತ್ತಿರುವ ವೇತನಕ್ಕೆ ಅನುಗುಣವಾಗಿ ಕೆಲಸದ ಅವಧಿಯನ್ನು ಕಡಿಮೆ ನಮೂದಿಸುವ ಮೂಲಕ ತಪ್ಪು ಮಾಹಿತಿ ನೀಡಿದ್ದಾರೆ. ಇದನ್ನು ತಡೆಗಟ್ಟಿ ಸೂಕ್ತ ವೇತನವನ್ನು ಕಾರ್ಮಿಕರಿಗೆ ನೀಡಬೇಕು ಎಂದು ಸಂಘಟನೆಯ ಮುಖಂಡರು ಜಿಲ್ಲಾಧಿಕಾರಿಗಳ ಮೂಲಕ ಆಯುಕ್ತರಿಗೆ ಬರೆದ ಪತ್ರದಲ್ಲಿ ಮನವಿ ಮಾಡಿದ್ದಾರೆ.

ಕಾರ್ಮಿಕರ ಸಂಘದ ರಾಜ್ಯ ಸಹ ಸಂಚಾಲಕ ಮಹೇಶ ನಾಡಗೌಡ, ಎಐಯುಟಿಯುಸಿ ಜಿಲ್ಲಾ ಘಟಕದ ಅಧ್ಯಕ್ಷ ವಿ.ಜಿ. ದೇಸಾಯಿ, ಕಾರ್ಯದರ್ಶಿ ಎಸ್‌.ಎಂ. ಶರ್ಮಾ, ಮಲ್ಲಿನಾಥ ಸಿಂಗೆ, ರಾಮಲಿಂಗಪ್ಪ ಯಾದಗಿರಿ, ಸಾಬಣ್ಣ ಸೇಡಂ, ರಮೇಶ ಕೊಪ್ಪಳ, ಭೀಮಾಶಂಕರ, ವೀರಶೆಟ್ಟಿ ಬೀದರ, ಪ್ರದೀಪ, ಸುರೇಶ, ವೆಂಕಟೇಶ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT