ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಆರೋಪ ಇರೋರೆಲ್ಲಾ ರಾಜೀನಾಮೆ ನೀಡಿದರೆ ಕೇಂದ್ರದ ಅರ್ಧ ಸಂಪುಟ ಖಾಲಿ: ಅಜಯ್‌ ಸಿಂಗ್‌

Published : 28 ಸೆಪ್ಟೆಂಬರ್ 2024, 16:16 IST
Last Updated : 28 ಸೆಪ್ಟೆಂಬರ್ 2024, 16:16 IST
ಫಾಲೋ ಮಾಡಿ
Comments

ಕಲಬುರಗಿ: ‘ಮುಡಾ ಹಗರಣ ಮುಂದಿಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೇಳುತ್ತಿದೆ. ಆದರೆ, ಆರೋಪ ಇರೋರೆಲ್ಲರೂ ರಾಜೀನಾಮೆ ಕೊಟ್ಟರೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಅರ್ಧ ಸಚಿವ ಸಂಪುಟವೇ ಖಾಲಿಯಾಗುತ್ತದೆ’ ಎಂದು ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಅಜಯ್ ಸಿಂಗ್‌ ವ್ಯಂಗ್ಯವಾಡಿದ್ದಾರೆ.

‘ಹಿಂದೆ ಗೋಧ್ರಾ ಪ್ರಕರಣದಲ್ಲಿ ಎಫ್‌ಐಆರ್‌ ಆಗಿದ್ದಾಗ ನರೇಂದ್ರ ಮೋದಿ ರಾಜೀನಾಮೆ ಕೊಟ್ಟಿದ್ದರಾ‌? ಆಗ ಮೋದಿ ಅವರೂ ರಾಜೀನಾಮೆ ಕೊಟ್ಟಿರಲಿಲ್ಲ. ಇದೀಗ ಕೇಂದ್ರದಲ್ಲಿ ಸಚಿವರಾಗಿರುವ ಎಚ್‌.ಡಿ.ಕುಮಾರಸ್ವಾಮಿ, ನಿರ್ಮಲಾ ಸೀತಾರಾಮನ್‌ ಅವರೂ ರಾಜೀನಾಮೆ ಕೊಟ್ಟಿಲ್ಲ. ಸಿದ್ದರಾಮಯ್ಯ ಯಾಕೆ ರಾಜೀನಾಮೆ ಕೊಡಬೇಕು’ ಎಂದು ಪ್ರಶ್ನಿಸಿದ್ದಾರೆ.

‘ಆರೋಪ ವಿಷಯ ತನಿಖೆಯಾಗಲಿ. ಸತ್ಯಾಸತ್ಯತೆ ಹೊರಬರಲಿ. ಬಿಜೆಪಿ ವಿನಾಕಾರಣ ಇದನ್ನೇ ದೊಡ್ಡದು ಮಾಡುತ್ತ ರಾಜೀನಾಮೆಗೆ ಆಗ್ರಹಿಸುತ್ತಿದೆ. ಬಿಜೆಪಿ ಇಂತಹ ವಿಷಯಗಳಲ್ಲಿ ರಾಜಕೀಯ ಮಾಡಬಾರದು. ಆತ್ಮಾವಲೋಕನ ಮಾಡಿಕೊಳ್ಳಬೇಕು’ ಎಂದು ಪತ್ರಿಕಾ ಪ್ರಕಟಣೆ ಮೂಲಕ ಸಲಹೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT