ಆಳಂದ: ‘ತಾಲ್ಲೂಕು ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆಯ ಅಭಿವೃದ್ಧಿ ಕಾಮಗಾರಿ ಮತ್ತು ಕಾರ್ಯ ಚಟುವಟಿಕೆಗಳ ಕುರಿತು ಪ್ರತಿ ತಿಂಗಳು ಜಿಲ್ಲಾಧಿಕಾರಿ ಕಚೇರಿಗೆ ವರದಿ ಸಲ್ಲಿಸಬೇಕು. ವೈಯಕ್ತಿಕವಾಗಿ ಪರಿಶೀಲನೆ ಕೈಗೊಳ್ಳುತ್ತೆನೆ’ ಎಂದು ಜಿಲ್ಲಾಧಿಕಾರಿ ಇಕ್ರಂ ಶರೀಫ್ ತಿಳಿಸಿದರು.

ತಾಲ್ಲೂಕು ಆಡಳಿತ ಭವನದಲ್ಲಿ ಶನಿವಾರ ಆಳಂದ ಪಟ್ಟಣದ ವಿವಿಧ ಅಭಿವೃದ್ಧಿ ಕಾಮಗಾರಿಗಳ ವೀಕ್ಷಣೆ ಮಾಡಿದ ನಂತರ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು.

‘ರಸ್ತೆ ವಿಸ್ತರಣೆ, ನೀರಿನ ಟ್ಯಾಂಕ್ ನಿರ್ಮಾಣ, ಪೈಪ್ಲೈನ್ ಅಳವಡಿಕೆ ಸೇರಿದಂತೆ ಪಟ್ಟಣದಲ್ಲಿನ ಅಭಿವೃದ್ಧಿ ಕಾಮಗಾರಿಗಳು ಮಂದಗತಿಯಲ್ಲಿ ಸಾಗುತ್ತಿದೆ. ಕಾಮಗಾರಿಗಳಲ್ಲಿ ಕೆಲಸ ಮಾಡುವ ದಿನಗೂಲಿ ನೌಕರರ ಥಂಬ್ ಇಂಪ್ರೆಶನ್ ಇಲ್ಲವೆ ರಿಜಿಸ್ಟರ್ ಹಾಜರಾತಿ ನಿರ್ವಹಣೆ ಮಾಡಬೇಕು’ ಎಂದು ಸೂಚಿಸಿದರು.

‘ಖಜೂರಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಿದ ಮಾಹಿತಿ ಪಡೆದು ತಕ್ಷಣ ಗ್ರಾಮಕ್ಕೆ ತಾ.ಪಂ ಇಒ ಭೇಟಿ ನೀಡಿ ವರದಿ ಸಲ್ಲಿಸಲು ತಾಕೀತು ಮಾಡಿದ ಜಿಲ್ಲಾಧಿಕಾರಿ, ನೀರಿನ ಸಮಸ್ಯೆಯುಳ್ಳ ಗ್ರಾಮಗಳಿಗೆ ತಹಶೀಲ್ದಾರ್ ಸೇರಿದಂತೆ ಕಾರ್ಯಪಡೆ ಅಧಿಕಾರಿಗಳು ಭೇಟಿ ನೀಡಿ ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ತಿಳಿಸಿದರು.

ಆಹಾರ ಇಲಾಖೆ ಅಧಿಕಾರಿಗಳಿಂದ ಗ್ಯಾಸ್ ಸಿಲೆಂಡರ್ ವಿತರಣೆ, ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರಿಂದ ಬಿತ್ತನೆ ಬೀಜ, ಗೊಬ್ಬರದ ಸಿದ್ಧತೆ, ಸಂಗ್ರಹ ಕುರಿತು ಮಾಹಿತಿ ಪಡೆದರು. ಪಟ್ಟಣದ ಅಮೃತ ಯೋಜನೆಯಡಿ ನಿರ್ಮಾಣಗೊಳ್ಳುತ್ತಿರುವ ನೀರಿನ ಟ್ಯಾಂಕ್ ವೀಕ್ಷಣೆ, ರಸ್ತೆ ವಿಸ್ತರಣೆ ಕಾಮಗಾರಿ ಪರಿಶೀಲನೆ ನಡೆಸಿ ಕೊರಳ್ಳಿ ಸಮೀಪದ ಅಮರ್ಜಾ ಅಣೆಕಟ್ಟೆಗೆ ಭೇಟಿ ನೀಡಿ ಪೈಪ್ ಲೈನ್ ಕಾಮಗಾರಿ ಕಾರ್ಯ ಪರಿಶೀಲಿಸಿದರು.

ಸಹಾಯಕ ಆಯುಕ್ತೆ ಸಾಹಿತ್ಯ ಆಲದಕಟ್ಟಿ, ಜಿ.ಪಂ ಯೋಜನಾ ನಿರ್ದೇಶಕ ಮುನ್ವರ್ ದೌಲಾ, ತಹಶೀಲ್ದಾರ್ ಅಣ್ಣಾರಾವ ಪಾಟೀಲ, ಸಹಕಾರ ಹಾಲು ಒಕ್ಕೂಟದ ಅಧ್ಯಕ್ಷ ಆರ್.ಕೆ.ಪಾಟೀಲ, ಪುರಸಭೆ ಮುಖ್ಯಾಧಿಕಾರಿ ಸಂಗಮೇಶ ಪನಶೆಟ್ಟಿ, ತಾ.ಪಂ ಇಒ ಮಾನಪ್ಪ ಕಟ್ಟಿಮನಿ, ಜೆಜೆಎಂ ಅಧಿಕಾರಿ ಮಲ್ಲಿಕಾರ್ಜುನ ಇತರರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-31-1107544742

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.