ಆಳಂದ: ‘ಸಾರ್ವಜನಿಕರ ಕುಂದುಕೊರತೆ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವ ಮೂಲಕ ಜನಸ್ನೇಹಿ ಆಡಳಿತ ಸೇವೆ ಒದಗಿಸಬೇಕು’ ಎಂದು ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರು ಸ್ಥಳೀಯ ಅಧಿಕಾರಿಗಳಿಗೆ ಸೂಚಿಸಿದರು.

ಪಟ್ಟಣದ ತಾಲ್ಲೂಕು ಆಡಳಿತ ಭವನದಲ್ಲಿ ಗುರುವಾರ ನಡೆದ ಸಾರ್ವಜನಿಕರ ಅಹವಾಲು ಸ್ವೀಕಾರ ಜನಸಂಪರ್ಕ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದೆ. ನೀರಿನ ಸಮಸ್ಯೆ ಎದುರಿಸುವ ಗ್ರಾಮ, ವಾರ್ಡ್ಗಳನ್ನು ಗುರುತಿಸಿ ಮುನ್ನೆಚ್ಚೆರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಸ್ಥಳೀಯ ಮಟ್ಟದಲ್ಲಿ ಇತ್ಯರ್ಥಗೊಳ್ಳುವ ಅರ್ಜಿಗಳನ್ನು ವಿಳಂಬ ಮಾಡದೆ ಬಗೆಹರಿಸಬೇಕು. ಪ್ರತಿ ಎರಡು ತಿಂಗಳಿಗೊಮ್ಮೆ ತಾಲ್ಲೂಕು ಮಟ್ಟದಲ್ಲಿ ಜನಸಂಪರ್ಕ ಸಭೆ ನಡೆಸಲಾಗುವುದು’ ಎಂದರು.

ಶುಕ್ರವಾಡಿ ಗ್ರಾಮದ ರಸ್ತೆ ಸಮಸ್ಯೆಯಿಂದಾಗಿ ಕಳೆದ ಆರು ವರ್ಷದಿಂದ ಬಸ್ ಸಂಪರ್ಕ ಹಾಗೂ ವಾಹನ ಸಂಚಾರಕ್ಕೆ ಅಡ್ಡಿ ಎದುರಾಗಿದೆ. ಗ್ರಾಮಸ್ಥರು ಹಲವು ಬಾರಿ ಮನವಿ ಮಾಡಿದರೂ ಸಮಸ್ಯೆ ಬಗೆಹರಿದಿಲ್ಲ ಎಂದು ಗ್ರಾಪಂ ಮಾಜಿ ಅಧ್ಯಕ್ಷ ಬಾಬುರಾವ ಪಾಟೀಲ ನೇತೃತ್ವದಲ್ಲಿ ಗ್ರಾಮಸ್ಥರು ಸಮಸ್ಯೆ ತೊಡಿಕೊಂಡರು.

ಆಳಂದ ಪಟ್ಟಣದಲ್ಲಿ ಕುಡಿಯುವ ನೀರು ಪೂರೈಕೆ, ಸ್ವಚ್ಛತೆ ಕಾರ್ಯದ ಬಗ್ಗೆ ನಿರ್ಲಕ್ಷ ಹೆಚ್ಚಾಗಿದೆ ಎಂದು ಪಟ್ಟಣವಾಸಿ ಮಲ್ಲಿಕಾರ್ಜುನ ವಣದೆ ಸಭೆಯಲ್ಲಿ ಗಮನ ಸೆಳದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ, ‘ಆಯಾ ವಾರ್ಡ್ಗಳಿಗೆ ಭೇಟಿ ನೀಡಿ ಸಮಸ್ಯೆ ಬಗೆಹರಿಸಲು ಮುಖ್ಯಾಧಿಕಾರಿ ಸಂಗಮೇಶ ಪನಶೆಟ್ಟಿ ಅವರಿಗೆ ಸೂಚಿಸಿದರು.

ಸಹಾಯಕ ಆಯುಕ್ತೆ ಸಾಹಿತ್ಯ ಆಲದಕಟ್ಟೆ, ಯೋಜನಾ ನಿರ್ದೇಶಕ ಮುನಾವರ್ ದೌಲಾ, ತಹಶೀಲ್ದಾರ್ ಅಣ್ಣರಾವ ಪಾಟೀಲ, ತಾಪಂ ಇಒ ಮಾನಪ್ಪ ಕಟ್ಟಿಮನಿ, ಸಮಾಜ ಕಲ್ಯಾಣಾಧಿಕಾರಿ ವಿಜಯಲಕ್ಷ್ಮಿ ಹೋಳ್ಕರ್, ಬಿಇಒ ವಿ.ರಂಗಸ್ವಾಮಿ ಶೆಟ್ಟಿ, ಮುಖ್ಯಾಧಿಕಾರಿ ಸಂಗಮೇಶ ಪನಶೆಟ್ಟಿ, ಯಲ್ಲಪ್ಪ ಇಂಗಳೆ, ಪಿಐ ಶರಣಬಸಪ್ಪ ಕೊಡ್ಲಾ, ಪ್ರಭುಲಿಂಗ ನಿಂಬಿತೋಟ ಉಪಸ್ಥಿತರಿದ್ದರು.

ವಿವಿಧ ಸಂಘಟನೆ ಪ್ರಮುಖರಾದ ಮೌಲಾ ಮುಲ್ಲಾ, ಭೀಮಾಶಂಕರ ಮಾಡಿಯಾಳ, ಲಿಂಗರಾಜ ಪಾಟೀಲ, ರವೀಂದ್ರ ಕೋರಳ್ಳಿ, ಮಲ್ಲಿಕಾರ್ಜುನ ಬೋಳಣಿ, ತಥಾಗತ ಮೂಲಭಾರತಿ, ಸುಲೇಮಾನ ಮುಗುಟ್, ರಮೇಶ ಜಗತಿ ಹಾಗೂ ಮಹಿಳೆಯರು ವಿವಿಧ ಬೇಡಿಕೆಗಳ ಮನವಿ ಸಲ್ಲಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-31-532332391

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.