ಕಲಬುರಗಿ: ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದ್ದ ಮತಕಳವು ಯತ್ನ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳ ಎಸ್ಐಟಿ ತಂಡ ನಗರದ ಐದು ಕಡೆ ದಾಳಿ ಮಾಡಿ ಮಾಹಿತಿ ಕಲೆಹಾಕಿದೆ.

ನಗರದ ರೋಜಾ ಬಡಾವಣೆ, ಜಂಜಂ ಕಾಲೊನಿ, ರಾಮನಗರ ಬಡಾವಣೆ ಹಾಗೂ ಯಾದುಲ್ ಕಾಲೊನಿಯ ಕೆಲವರ ಮನೆಗಳಿಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಆಳಂದ ಕ್ಷೇತ್ರದ ಚುನಾವಣೆಗೂ ಮುನ್ನ ಮತದಾರರ ಪಟ್ಟಿಯಿಂದ 6 ಸಾವಿರದಷ್ಟು ಹೆಸರುಗಳನ್ನು ತೆಗೆದುಹಾಕಲು ಯತ್ನಿಸಿದ್ದ ಆರೋಪ ಕೇಳಿ ಬಂದಿತ್ತು. ಈ ಕುರಿತು ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆಗೆ ಆಳಂದ ಶಾಸಕ ಆರ್.ಬಿ.ಪಾಟೀಲ ಒತ್ತಾಯಿಸಿದ ಬಳಿಕ ಸಿಐಡಿಗೆ ವಹಿಸಲಾಗಿತ್ತು. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಆಯೋಗದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಆ ಬಳಿಕ ರಾಜ್ಯ ಸರ್ಕಾರವು ಈ ಪ್ರಕರಣದ ತನಿಖೆಗೆ ಎಸ್ಐಟಿ ರಚಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.