ಆಳಂದ: ಅಖಿಲ ಭಾರತ ಕಿಸಾನ್ ಸಭಾ ತಾಲ್ಲೂಕು ಸಮಿತಿ ಹಾಗೂ ಭಾರತೀಯ ಕೃಷಿ ಕೂಲಿಕಾರ್ಮಿಕರ ಸಂಘದ ನೇತೃತ್ವದಲ್ಲಿ ಸೋಮವಾರ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಶಾಸಕರ ಸಂಪರ್ಕ ಕಚೇರಿಗೆ ಮುಂದೆ ಪ್ರತಿಭಟನೆ ಕೈಗೊಳ್ಳಲಾಯಿತು.

ಹೋರಾಟಗಾರ ಮೌಲಾ ಮುಲ್ಲಾ ನೇತೃತ್ವದಲ್ಲಿ ಕಳೆದ ಮಾರ್ಚ್ 2ರಿಂದ ಸತತ ಎರಡು ತಿಂಗಳಿನಿಂದ ಆಳಂದ ಪಟ್ಟಣದಲ್ಲಿ ನಡೆಸಲಾಗುತ್ತಿರುವ ಧರಣಿ ಸತ್ಯಾಗ್ರಹದ ಸ್ಥಳದಿಂದ ಶಾಸಕ ಬಿ.ಆರ್.ಪಾಟೀಲ ಅವರ ಸಂಪರ್ಕ ಕಚೇರಿಯವರೆಗೆ ಕಾಲ್ನಡಿಗೆ ಮೆರವಣಿಗೆ ನಡೆಸಲಾಯಿತು.

ಮೌಲಾ ಮುಲ್ಲಾ ಮಾತನಾಡಿ, ‘ಕೃಷಿಕರು, ಕೂಲಿಕಾರ್ಮಿಕರ ಬ್ಯಾಂಕ್ ಸಾಲ ಸಂಪೂರ್ಣ ಮನ್ನಾ ಮಾಡಬೇಕು, ಮುಂಗಾರು ಬಿತ್ತನೆ ಪೂರ್ವದಲ್ಲಿ ರೈತರಿಗೆ ಅಗತ್ಯ ಬೀಜ, ಗೊಬ್ಬರ ಹಾಗೂ ಕೃಷಿ ಚಟುವಟಿಕೆಗಳ ಸಲಕರಣೆ ವಿತರಣೆ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ಕಿಸಾನ್ ಸಭಾ ಜಿಲ್ಲಾಧ್ಯಕ್ಷ ಭೀಮಾಶಂಕರ ಮಾಡಿಯಾಳ, ಧರ್ಮಣ್ಣಾ ಪೂಜಾರಿ, ಮಹಾದೇವ ಪೂಜಾರಿ, ಅಸ್ಪಾಕ್ ಮುಲ್ಲಾ, ಪಂಡಿತ ಸಲಗರೆ, ರಮೇಶ ಹತ್ತಗಾಳೆ, ಮಹಾದೇವ ಜಿಡ್ಡೆ, ಕಮಲೇಶ ಅವಟೆ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-31-1744762745

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.