ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಟೈಪೆಂಡ್ ದುರ್ಬಳಕೆ: ಎಚ್‌ಕೆಇ ಮಾಜಿ ಅಧ್ಯಕ್ಷ ಸೇರಿ ನಾಲ್ವರ ವಿರುದ್ಧ ಪ್ರಕರಣ

Published 31 ಮಾರ್ಚ್ 2024, 16:18 IST
Last Updated 31 ಮಾರ್ಚ್ 2024, 16:18 IST
ಅಕ್ಷರ ಗಾತ್ರ

ಕಲಬುರಗಿ: ಇಲ್ಲಿನ ಹೈದರಾಬಾದ್ ಶಿಕ್ಷಣ ಸಂಸ್ಥೆಯ (ಎಚ್‌ಕೆಇ) ಮಹಾದೇವಪ್ಪ ರಾಂಪೂರೆ ವೈದ್ಯಕೀಯ ಕಾಲೇಜಿನ (ಎಂಆರ್‌ಎಂಸಿ) ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳ ₹ 81.21 ಕೋಟಿ ಸ್ಟೈಪೆಂಡ್ ದುರ್ಬಳಕೆ ಮಾಡಿಕೊಂಡ ಆರೋಪದಡಿ ಸಂಸ್ಥೆಯ ಮಾಜಿ ಅಧ್ಯಕ್ಷ ಸೇರಿ ನಾಲ್ವರ ವಿರುದ್ಧ ಭಾನುವಾರ ಪ್ರಕರಣ ದಾಖಲಾಗಿದೆ.

ಸಂತ್ರಸ್ತ ವಿದ್ಯಾರ್ಥಿಗಳು ಹಾಗೂ ವಕೀಲ ವಿನೋದಕುಮಾರ್ ಜೆನೇವರಿ ನೀಡಿದ ದೂರಿನ ಅನ್ವಯ, ಸೈಬರ್, ಆರ್ಥಿಕ ಮತ್ತು ಮಾದಕವಸ್ತು ತಡೆ (ಸೆನ್) ಠಾಣೆಯಲ್ಲಿ ಸಂಸ್ಥೆಯ ಮಾಜಿ ಅಧ್ಯಕ್ಷ ಭೀಮಾಶಂಕರ ಬಿಲಗುಂದಿ, ಕಾಲೇಜಿನ ಪ್ರಾಂಶುಪಾಲ ಡಾ.ಎಸ್‌.ಎಂ. ಪಾಟೀಲ, ಕಾಲೇಜಿನ ಅಕೌಂಟೆಂಟ್ ಸುಭಾಷ ಜಗನ್ನಾಥ ಮತ್ತು ಕೆನರಾ ಬ್ಯಾಂಕ್‌ ಎಂಆರ್‌ಎಂಸಿ ಶಾಖೆಯ ವ್ಯವಸ್ಥಾಪಕರ ವಿರುದ್ಧ ಪ್ರಕರಣ ದಾಖಲಾಗಿದೆ.

ನಾಲ್ವರು ಆರೋಪಿಗಳು ಸೇರಿ ಇತರರು 2018ರಿಂದ 2024ರವರೆಗೆ 282 ಪಿಜಿ ವೈದ್ಯಕೀಯ ವಿದ್ಯಾರ್ಥಿಗಳಿಗೆ ಸೇರಬೇಕಿದ್ದ ₹ 81.21 ಕೋಟಿ ಸ್ಟೈಫಂಡ್ ದುರ್ಬಳಕೆ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿಗಳ ಖಾತೆಗೆ ಸ್ಟೈಫಂಡ್ ಹಣ ಜಮೆ ಮಾಡಿಸಿದ್ದ ಆರೋಪಿಗಳು, ಬಳಿಕ ವಿದ್ಯಾರ್ಥಿಗಳಿಂದ ಖಾಲಿ ಚೆಕ್‌ಗಳಿಗೆ ಅಕ್ರಮವಾಗಿ ಸಹಿ ಪಡೆದಿದ್ದರು. ನಂತರ ಅಕ್ರಮವಾಗಿ ಸ್ಟೈಫಂಡ್‌ ಅನ್ನು ವಿತ್‌ಡ್ರಾ ಮಾಡಿಕೊಂಡು ತಮ್ಮ ಸ್ವಂತಕ್ಕೆ ಬಳಸಿಕೊಂಡು ವಂಚನೆ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಸ್ಟೈಪೆಂಡ್ ಮರಳಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಸರಣಿ ಪ್ರತಿಭಟನೆ ನಡೆಸಿದ್ದರು. ಈಚೆಗೆ ನಡೆದ ಸಂಸ್ಥೆಯ ಚುನಾವಣೆಯಲ್ಲೂ ಇದು ಪ್ರಮುಖ ವಿಷಯವಾಗಿತ್ತು. ಚುನಾವಣೆಯಲ್ಲಿ ಫರಾಭವಗೊಂಡಿದ್ದ ಭೀಮಾಶಂಕರ ಅವರು, ಭಾನುವಾರವಷ್ಟೇ ನೂತನ ಅಧ್ಯಕ್ಷ ಶಶೀಲ್‌ ಜಿ.ನಮೋಶಿ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT