ಚಿತ್ತಾಪುರ: ಹಳೆಯ ವೈಷಮ್ಯಕ್ಕೆ ಯುವಕನೊಬ್ಬನನ್ನು ಕಲ್ಲಿನಿಂದ ಹೊಡೆದು ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ಅಲ್ಲೂರ್ (ಬಿ) ಗ್ರಾಮದಲ್ಲಿ ನಡೆದಿದೆ.

ಸಿದ್ದಪ್ಪ ಮಲ್ಲಪ್ಪ ಹುಳಗೊಳರ್ (25) ಕೊಲೆಯಾದ ಯುವಕ. ಘಟನೆಯ ಸುದ್ದಿ ತಿಳಿಯುತ್ತಿದಂತೆ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಮಂಗಳವಾರ ರಾತ್ರಿ ಗ್ರಾಮದ ಕೆರೆಯ ಹತ್ತಿರ ಸಿದ್ದಪ್ಪ ಅವರ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕೊಲೆಯಾದ ಯುವಕನ ಶವವನ್ನು ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ಕುಟುಂಬಕ್ಕೆ ಒಪ್ಪಿಸಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-34-1638606726

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.