ಮಂಗಳವಾರ, ಅಕ್ಟೋಬರ್ 27, 2020
22 °C
ಪರಿಷತ್‌ ಚುನಾವಣೆಗೆ ಟಿಕೆಟ್ ನಿರಾಕರಣೆಗೆ ಬೇಸರ

ಜೆಡಿಎಸ್‌ಗೆ ಅಂಬಲಗಿ ರಾಜೀನಾಮೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಗೆ ಜೆಡಿಎಸ್‌ನಿಂದ ಸ್ಪರ್ಧಿಸಲು ಬಯಸಿದ್ದ ಪಕ್ಷದ ಮುಖಂಡ ಎಂ.ಬಿ. ಅಂಬಲಗಿ ಅವರ ಬರಲು ತಿಮ್ಮಯ್ಯ ಪುರ್ಲೆ ಅವರಿಗೆ ಟಿಕೆಟ್ ಘೋಷಿಸಿದ್ದರಿಂದ ನೊಂದಿರುವ ಅಂಬಲಗಿ ಅವರು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

‘2014ರಲ್ಲಿ ಈಶಾನ್ಯ ಕರ್ನಾಟಕ ಶಿಕ್ಷಕರ ವಿಧಾನ ಪರಿಷತ್ ಮತಕ್ಷೇತ್ರಕ್ಕೆ ಅಭ್ಯರ್ಥಿಯಾದಾಗ 10 ವರ್ಷ ಸೇವಾವಧಿಗೆ ರಾಜೀನಾಮೆ ನೀಡಿ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತೆ. ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡ ನನ್ನನ್ನು ಜೆಡಿಎಸ್‍ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಿದ ನಂತರ 2018ರ ವಿಧಾನಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರು ಮಾಡಿದ ಜನಪರ ಕೆಲಸಗಳ ಬಗ್ಗೆ ಹೈ.ಕ. ಭಾಗದಲ್ಲಿ ಲಕ್ಷಾಂತರ ಕರಪತ್ರಗಳನ್ನು ಮುದ್ರಿಸಿ ಪ್ರಚಾರ ಮಾಡಿದ್ದೆ’ ಎಂದು ಅವರು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ವಿಧಾನ ಪರಿಷತ್ ಚುನಾವಣೆಗೆ ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ನನ್ನನ್ನು ಘೋಷಿಸದೆ ಬೇರೆಯವರ ಹೆಸರನ್ನು ಪ್ರಕಟಿಸಿರುವುದು ಮನಸ್ಸಿಗೆ ನೋವಾಗಿದೆ. ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯನನ್ನಾಗಿ ನೇಮಕ ಮಾಡುವುದಾಗಿ ಭರವಸೆ ನೀಡಿದ್ದರು. ಅದು ಕಾರ್ಯಗತವಾಗಿಲ್ಲ. ಟಿಕೆಟ್‌ ಸಹ ತಪ್ಪಿಸಲಾಗಿದೆ. ಈ ಎಲ್ಲಾ ಕಾರಣಗಳಿಂದ ಪಕ್ಷದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗದೇ ರಾಜೀನಾಮೆ ನೀಡಿರುವೆ’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.