ಭಾನುವಾರ, 25 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಅಂಬೇಡ್ಕರ್‌ ಸಮುದಾಯ ಭವನ: ಅಧಿಕಾರಿಗಳ ನಿರ್ಲಕ್ಷ್ಯ’

Published 1 ಫೆಬ್ರುವರಿ 2024, 14:02 IST
Last Updated 1 ಫೆಬ್ರುವರಿ 2024, 14:02 IST
ಅಕ್ಷರ ಗಾತ್ರ

ಕಲಬುರಗಿ: ‘ಚಿತ್ತಾಪೂರ ತಾಲ್ಲೂಕಿನ ವಾಡಿ ಪಟ್ಟಣದ ವಾರ್ಡ್‌ 16ರಲ್ಲಿರುವ ಅಂಬೇಡ್ಕರ್‌ ಸಮುದಾಯ ಭವನ ಎಂಟು ವರ್ಷಗಳಾದರೂ ತಳಪಾಯ ಬಿಟ್ಟು ಮೇಲೆದ್ದಿಲ್ಲ’ ಎಂದು ರಿಪಬ್ಲಿಕನ್‌ ಪಾರ್ಟಿ ಆಫ್‌ ಇಂಡಿಯಾದ ಜಿಲ್ಲಾ ಉಪಾಧ್ಯಕ್ಷ ಶರಣಪ್ಪ ಎಂ. ವಾಡೇಕರ್‌ ಹೇಳಿದರು.

ಈ ಕುರಿತು ಪತ್ರಿಕಾಗೋಷ್ಠಿ ನಡೆಸಿದ ಅವರು, 2016ರಲ್ಲಿ ಸಮುದಾಯ ಭವನಕ್ಕೆ ₹85 ಲಕ್ಷ ಮಂಜೂರಾಗಿದ್ದು, ಗುತ್ತಿಗೆದಾರರು ತಳಪಾಯ ಹಾಕಿ ನಾಪತ್ತೆಯಾಗಿದ್ದಾರೆ. ಪುರಸಭೆ ಮುಖ್ಯಾಧಿಕಾರಿ ಮತ್ತು ಕಿರಿಯ ಎಂಜಿನಿಯರ್‌ ನಿರ್ಲಕ್ಷ್ಯದಿಂದ ಕಾಮಗಾರಿ ಸ್ಥಗಿತವಾಗಿದೆ. ಹೀಗಾಗಿ ಈ ಇಬ್ಬರೂ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು. ಇಲ್ಲದಿದ್ದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರಸ್ತೆ ತಡೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಯುವಘಟಕದ ಜಿಲ್ಲಾ ಅಧ್ಯಕ್ಷ ಅಭಿಷೇಕ್‌ ಚಕ್ರವರ್ತಿ, ಬಸವರಾಜ, ರುದ್ರ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT