ಚಿತ್ತಾಪುರ: ‘ಡಾ.ಅಂಬೇಡ್ಕರ್ ಎಂದರೆ ಕೇವಲ ಹೆಸರು ಮಾತ್ರವಲ್ಲ. ಅಂಬೇಡ್ಕರ್ ಎಂದರೆ ಶಕ್ತಿ, ಅವರೆಂದರೆ ಹೋರಾಟ, ಅವರೆಂದರೆ ಕ್ರಾಂತಿ’ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌದರಿ ಹೇಳಿದರು.

ಪಟ್ಟಣದಲ್ಲಿನ ರೇವಣಸಿದ್ಧಪ್ಪಾ ಕಾಂತಾ ಸರ್ಕಾರಿ ಪದವಿ ಕಾಲೇಜಿನಲ್ಲಿ ಶನಿವಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ, ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ವಿದ್ಯೆ ಎಂದರೆ ಕೇವಲ ಡಿಗ್ರಿ ಮತ್ತು ಪ್ರಮಾಣ ಪತ್ರವವಲ್ಲ ಅದು ಜ್ಞಾನ, ಸಮಾನತೆಯ ಅರಿವು. ತಮ್ಮ ಹಕ್ಕುಗಳನ್ನು ತಿಳಿದುಕೊಂಡು ಪಡೆದುಕೊಳ್ಳಬೇಕು. ಸಂವಿಧಾನದಲ್ಲಿ ನಮಗಾಗಿ ಇರುವ ಹಕ್ಕುಗಳು ತಿಳಿಯದಿದ್ದರೆ ಜೀವಂತವಿದ್ದರೂ ಸತ್ತಂತೆ. ವಿದ್ಯಾರ್ಥಿಗಳು ಜಾಗೃತರಾಗಬೇಕು’ ಎಂದರು.

‘ಅಧಿಕಾರಿಗಳು ಮಕ್ಕಳು ಮತ್ತು ಮಹಿಳೆಯರಿಗೆ ಸಿಗುವ ಸರ್ಕಾರದ ಸೌಲಭ್ಯಗಳ ಬಗ್ಗೆ ಜಾಗೃತಿ ಉಂಟು ಮಾಡಬೇಕು. ವಿದ್ಯಾರ್ಥಿಗಳು ತಮಗೆ ಸಿಗುವ ಸೌಲಭ್ಯಗಳ ಬಗ್ಗೆ ತಿಳಿದುಕೊಳ್ಳಬೇಕು. ಚಿತ್ತಾಪುರದ ಯುವಕರು–ಯುವತಿಯರು ಬಡವರಿಗೆ, ಅಸಹಾಯಕರಿಗೆ ನೆರವಾಗಬೇಕು’ ಎಂದು ಸಲಹೆ ನೀಡಿದರು.

ತಹಶೀಲ್ದಾರ್ ನಾಗಯ್ಯ ಹಿರೇಮಠ, ಶಿಶು ಅಭಿವೃದ್ಧಿ ಯೋಜನೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ಆರತಿ ತುಪ್ಪದ್, ಪಿಎಸ್ಐ ಮಂಜುನಾಥರೆಡ್ಡಿ ಹಾಗೂ ಕಾಲೇಜಿನ ಪ್ರಾಚಾರ್ಯ, ಉಪನ್ಯಾಸಕರು ಇದ್ದರು.

ಪೋಕ್ಸೊ ಕಾನೂನು ಅರಿವು ಕಾರ್ಯಕ್ರಮ:

ಪಟ್ಟಣದಲ್ಲಿನ ಅಣೆಮ್ಮ ಗೊಬ್ಬುರು ಪ್ರೌಢ ಶಾಲೆಯಲ್ಲಿ ಶನಿವಾರ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಇವರ ಆಯುಕ್ತಾಶ್ರಯದಲ್ಲಿ ಪೋಕ್ಸೊ ಕಾನೂನು ಅರಿವು ಕಾರ್ಯಕ್ರಮ ಜರುಗಿತು.

ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಅವರು ಪ್ರೌಢ ಶಾಲೆಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ನಮ್ಮ ಮೇಲೆ ಅನ್ಯಾಯ ಮಾಡಲು ಬಿಡುವುದಿಲ್ಲ ಮತ್ತು ಅನ್ಯಾಯ ಸಹಿಸುವುದಿಲ್ಲ ಎಂಬ ಪ್ರತಿಜ್ಞೆ ಬೋಧಿಸಿದರು. ಕಲಬುರಗಿ ಜಿಲ್ಲಾ ನಾಲ್ಕನೇ ಹೆಚ್ಚುವರಿ ನ್ಯಾಯಾಧೀಶ ಕರಣ್ ಗುಜ್ಜರ್ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ

ಅತಿಥಿಗಳಾಗಿ ತಾಲ್ಲೂಕು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿ ಸಿವಿಲ್ ನ್ಯಾಯಾಧೀಶ ಅಭಿಷೇಕ ಜೋಶಿ, ಅಪರ್ ಜಿಲ್ಲಾ ಸರ್ಕಾರಿ ವಕೀಲ ವಿ.ಆರ್.ಕಾಂತಾ, ಸಹಾಯಕ ಸರ್ಕಾರಿ ಅಭಿಯೋಜಕಿ ಅಂಜನಾದೇವಿ, ವಕೀಲರ ಸಂಘದ ಅಧ್ಯಕ್ಷ ಸೋಮಶೇಖರ್ ಕರದಳ್ಳಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಆರತಿ ತುಪ್ಪದ್, ಪುರಸಭೆ ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ, ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ಕಸ್ತೂರಿ ಎಸ್.ಪಾಟೀಲ, ವಕೀಲೆ ಮಂಜುಳಾ ಸರಡಗಿ ವೇದಿಕೆಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.