ಕಲಬುರಗಿ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಆಧುನಿಕ ಭಾರತದ ಶ್ರೇಷ್ಠ ನಾಯಕರಾಗಿದ್ದಾರೆ ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಶಿವ ಅಷ್ಠಗಿ ಹೇಳಿದರು.

ತಾಲ್ಲೂಕಿನ ಬಬಲಾದ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 134ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಸಮಾನತೆಯ ಸಂಕೇತವಾದ ನೀಲಿ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿ, ಅಂಬೇಡ್ಕರ್ ಸಂವಿಧಾನ ಮೂಲಕ ಭಾರತದ ಕಟ್ಟಕಡೆಯ ವ್ಯಕ್ತಿಗೂ ಸಮಾನ ಹಕ್ಕುಗಳು, ಸಮಾನ ಅವಕಾಶಗಳನ್ನು ಕಲ್ಪಿಸಿ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ನೀಡಿದ ಮಹಾನ್ ನಾಯಕರು. ಕೆಲವರು ಅಂಬೇಡ್ಕರ್ ದಲಿತ ನಾಯಕ ಎಂದು ಹೇಳುತ್ತಾರೆ. ಆದರೆ ಅವರು ಕೇವಲ ದಲಿತರು ಹಿಂದುಳಿದವರಷ್ಟೇ ಅಲ್ಲ, ಮಹಿಳೆಯರು ಸೇರಿದಂತೆ ಮುಂದುವರಿದ ಎಲ್ಲ ಜಾತಿಯ ಜನರ ಸಮಾನತೆಗಾಗಿ, ಏಳಿಗೆಗಾಗಿ ಶ್ರಮಿಸಿದ ಏಕೈಕ ನಾಯಕರಾಗಿದ್ದಾರೆ’ ಎಂದು ಹೇಳಿದರು.

ಯುವ ಮುಖಂಡ ಶರಣು ಅಲ್ಲಮಪ್ರಭು ಪಾಟೀಲ ಮಾತನಾಡಿ, ‘ಅಂಬೇಡ್ಕರ್ ಶಿಕ್ಷಣಕ್ಕೆ ತುಂಬಾ ಮಹತ್ವ ಕೊಟ್ಟಿದ್ದರು. ಆದರೆ ನಮ್ಮ ಭಾಗದಲ್ಲಿ ಶಿಕ್ಷಣ ಕುಂಠಿತಗೊಳ್ಳುತ್ತಿದೆ. ಪಿಯುಸಿ ಎಸ್ಎಸ್ಎಲ್ಸಿ ಫಲಿತಾಂಶವೇ ಉದಾಹರಣೆ. ಹೆಚ್ಚು ಮಕ್ಕಳ ಶಿಕ್ಷಣಕ್ಕೆ ಅಂಬೇಡ್ಕರ್ ಒತ್ತು ಕೊಟ್ಟಿದ್ದರು‘ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾವಳಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಮೇಶ ಕನಗೊಂಡ ವಹಿಸಿದ್ದರು. ವಿವಿಧ ಸ್ಪರ್ಧೆಗಳಲ್ಲಿ ಗೆದ್ದ ವಿಜೇತರಿಗೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸಂತೋಷ ಪಾಟೀಲ ದಣ್ಣೂರ ಬಹುಮಾನ ವಿತರಿಸಿದರು.

ವೇದಿಕೆ ಮೇಲೆ ತಾ.ಪಂ. ಮಾಜಿ ಸದಸ್ಯ ಮಡಿವಾಳಪ್ಪ ಮಡಿವಾಳ, ಕಾಂಗ್ರೆಸ್ ಮುಖಂಡ ಬಸವರಾಜ ವಾಲಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಚಂದ್ರಕಾಂತ ವಾಲಿ, ಉಪಾಧ್ಯಕ್ಷ ಯಮನಯ್ಯ ಗುತ್ತೇದಾರ, ಭೂ ನ್ಯಾಯ ಮಂಡಲಿ ಸದಸ್ಯ ಚನ್ನಪ್ಪ ಮರಬ, ಮುಖಂಡರಾದ ರಾಮಚಂದ್ರ ಪೊಲೀಸ್ ಪಾಟೀಲ, ಪಂಡಿತ್ ನಡಗೇರಿ, ಅಸ್ಲಂ ಜವಳಗಿ, ಶಾಂತಪ್ಪ ಕೋರಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.