ಸೋಮವಾರ, ಮೇ 23, 2022
30 °C

ನವದೆಹಲಿಯಲ್ಲಿ 14ರಂದು ಅಂಬೇಡ್ಕರ್‌, ಮಹಾವೀರ ಜಯಂತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರಗಿ: ಜೈಭಾರತ ಮಾತಾ ಸೇವಾ ಸಮಿತಿ ವತಿಯಿಂದ ನವದೆಹಲಿಯ ತಾಲ್‌ಕಟೋರಾ ಒಳಾಂಗಣ ಕ್ರೀಡಾಂಗಣದಲ್ಲಿ ಏ.14ರಂದು ಬೆಳಿಗ್ಗೆ 11 ಗಂಟೆಗೆ ಡಾ.ಬಿ.ಆರ್. ಅಂಬೇಡ್ಕರ್‌ ಮತ್ತು ಭಗವಾನ್‌ ಮಹಾವೀರ ಜಯಂತಿಯನ್ನು ಆಯೋಜಿಸಲಾಗಿದೆ. ನಿರಗುಡಿಯ ಹವಾ ಮಲ್ಲಿನಾಥ ಮಹಾರಾಜ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದು ಸೇವಾ ಸಮಿತಿ ರಾಷ್ಟ್ರೀಯ ವಕ್ತಾರ ವೈಜನಾಥ ಎಸ್‌. ಝಳಕಿ ತಿಳಿಸಿದರು.

ಜೈ ಭಾರತ ಮಾತಾ ಸೇವಾ ಸಮಿತಿಯನ್ನು ಹವಾ ಮಲ್ಲಿನಾಥ ಮಹಾರಾಜರೇ ಸ್ಥಾಪಿಸಿದ್ದಾರೆ. ಇದು ರಾಷ್ಟ್ರಮಟ್ಟದ ಸಂಘಟನೆಯಾಗಿದ್ದು, ನವದೆಹಲಿಯಲ್ಲಿ ಪ್ರಧಾನ ಕಚೇರಿ ಇದೆ. ನಮ್ಮ ನಾಡಿನ ನಾಯಕರು, ಮಹಾತ್ಮರ ಜಯಂತಿಗಳನ್ನು ವಿಶಿಷ್ಟವಾಗಿ ಆಚರಿಸುವ ಉದ್ದೇಶದಿಂದ ನವದೆಹಲಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಇದಕ್ಕೆ ದೇಶದ ಬೇರೆ ಬೇರೆ ಭಾಗಗಳು ಗಣ್ಯರು, ರೈತ ಮುಖಂಡರು, ಪರಿಶಿಷ್ಟ ಸಮುದಾಯದ ನಾಯಕರು ಕೂಡ ಭಾಗವಹಿಸಲಿದ್ದಾರೆ. ಜಿಲ್ಲೆಯಿಂದ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಜನ ಪಾಲ್ಗೊಳ್ಳಬೇಕು ಎಂದು ಅವರು ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಕೋರಿದರು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಡಾ.ಅಂಬೇಡ್ಕರ್‌ ಅವರ ವಂಶಸ್ಥರನ್ನು ಆಹ್ವಾನಿಸಲಾಗಿದೆ. ಸಾಮಾಜಿಕ ಹೋರಾಟಗಾರ ಎಂ.ಎಸ್.ಬಿಟ್ಟಾ, ಕೇಂದ್ರ ಸಚಿವರಾದ ರಾಮದಾಸ ಅಠಾವಳೆ, ನಾರಾಯಣ ಸ್ವಾಮಿ, ಭಗವಂತ ಖೂಬಾ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸವರು. ಬೇರೆ ಬೇರೆ ವಿಶ್ವವಿದ್ಯಾಲಯಗಳ ಅಧ್ಯಯನ ಪೀಠಗಳ ಮುಖ್ಯಸ್ಥರಿಂದ ಉಪನ್ಯಾಸ, ಸಂವಾದ ನಡೆಯಲಿವೆ ಎಂದರು. ಶ್ರೀಮಂತರಾವ ಪಾಟೀಲ ಆಳಂದಕರ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.