ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಲಬುರಗಿ: 19ರಂದು ಐದು ಪುಸ್ತಕಗಳು ಬಿಡುಗಡೆ

Published 16 ಮೇ 2024, 13:12 IST
Last Updated 16 ಮೇ 2024, 13:12 IST
ಅಕ್ಷರ ಗಾತ್ರ

ಕಲಬುರಗಿ: ಅಂಬುಜಾ ಮಳಖೇಡಕರ್ ಅನುವಾದಿಸಿದ ಐದು ಪುಸ್ತಕಗಳ ಬಿಡುಗಡೆ ಸಮಾರಂಭವು ನಗರದ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಸಭಾಂಗಣದಲ್ಲಿ ಮೇ 19ರ ಬೆಳಿಗ್ಗೆ 10.30ಕ್ಕೆ ನಡೆಯಲಿದೆ ಎಂದು ಸಂಸ್ಕೃತಿ ಪ್ರಕಾಶನದ ಸಂಚಾಲಕ ಪ್ರಭಾಕರ ಜೋಶಿ ತಿಳಿಸಿದ್ದಾರೆ.

ಕಲಾವಿದ ಶಶಿಧರ ನರೇಂದ್ರ ಅವರು ಪುಸ್ತಕಗಳನ್ನು ಬಿಡುಗಡೆ ಮಾಡಲಿದ್ದು, ಕಾಲೇಜು ಪ್ರಾಂಶುಪಾಲರಾದ ಆರ್.ಬಿ.ಕೊಂಡ ಅಧ್ಯಕ್ಷತೆ ವಹಿಸುವರು. ‘ಗೊಂಬೆಯ ಜೀವನ’, ‘ಮನ ಹರಿ ಧ್ಯಾನ ಮಂದಿರ’, ದಡ ಸೇರಿಸೆನ್ನ ಹರಿಯೇ’, ‘ಪ್ರೇಮ ಪದನಿಸ’ ಮತ್ತು ‘ರಾಜನ ನಂಟು ಕನ್ನಡಿಯ ಗಂಟು’ ಪುಸ್ತಕಗಳು ಬಿಡುಗಡೆಯಾಗಲಿವೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಸರ್ವಜ್ಞ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ವಿದ್ಯಾವತಿ ಪಾಟೀಲ, ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯ ಅತಿಥಿ ಉಪನ್ಯಾಸಕ ಎಂ.ಬಿ.ಕಟ್ಟಿ, ಲೇಖಕಿ ಕಾವ್ಯಶ್ರೀ ಮಹಾಗಾಂವಕರ್ ಹಾಗೂ ಪತ್ರಕರ್ತ ಮಹಿಪಾಲರೆಡ್ಡಿ ಮುನ್ನೂರ್ ಅವರು ಐದು ಪುಸ್ತಕಗಳನ್ನು ಪರಿಚಯಿಸುವರು ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT