ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸೇಡಂ: ನ.26 ರಂದು ಅಮ್ಮ ಪ್ರಶಸ್ತಿ ಪ್ರದಾನ

Published 23 ನವೆಂಬರ್ 2023, 14:54 IST
Last Updated 23 ನವೆಂಬರ್ 2023, 14:54 IST
ಅಕ್ಷರ ಗಾತ್ರ

ಕಲಬುರಗಿ: ‘ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ ಕೊಡಮಾಡುವ ರಾಜ್ಯಮಟ್ಟದ ಪ್ರಸಕ್ತ ಸಾಲಿನ ‘ಅಮ್ಮ ಪ್ರಶಸ್ತಿ’ ಪ್ರದಾನ ಸಮಾರಂಭವನ್ನು ಭಾನುವಾರ (ನ.26) ಸಂಜೆ 5.30ಕ್ಕೆ ಸೇಡಂ ಪಟ್ಟಣದ ಪಂಚಲಿಂಗೇಶ್ವರ ದೇವಾಲಯದ ಶಾಂಭವಿ ರಂಗಮಂಟಪದಲ್ಲಿ ಆಯೋಜಿಸಲಾಗಿದೆ’ ಎಂದು ಸಂಚಾಲಕಿ ರತ್ನಕಲಾ ಮಹಿಪಾಲರೆಡ್ಡಿ ತಿಳಿಸಿದ್ದಾರೆ.

‘ನಾಲವಾರ ಕೋರಿಸಿದ್ದೇಶ್ವರ ಮಠದ ಸಿದ್ಧತೋಟೇಂದ್ರ ಶಿವಾಚಾರ್ಯ ಸ್ವಾಮಿಗಳು, ಹರಿಹರ ಎರೆಹೊಸಳ್ಳಿಯ ರೆಡ್ಡಿ ಗುರುಪೀಠದ ವೇಮನಾನಂದ ಸ್ವಾಮಿಗಳು ಸಾನ್ನಿಧ್ಯ ವಹಿಸಲಿದ್ದು, ಸಚಿವ ರಾಮಲಿಂಗಾರೆಡ್ಡಿ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಸಚಿವ ಡಾ.ಶರಣಪ್ರಕಾಶ ಪಾಟೀಲ ವಹಿಸುವರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್.ಜಿ.ಸಿದ್ಧರಾಮಯ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ಸಂಸ್ಕೃತಿ ಮತ್ತು ಶಾಸನ ತಜ್ಞ ದೇವರಕೊಂಡಾರೆಡ್ಡಿ, ಕೇಂದ್ರೀಯ ವಿಶ್ವವಿದ್ಯಾಲಯ ಕನ್ನಡ ಪ್ರಾಧ್ಯಾಪಕ, ಲೇಖಕ ವಿಕ್ರಮ ವಿಸಾಜಿ ವಿಶೇಷ ಆಹ್ವಾನಿತರಾಗಿ ಭಾಗಿಯಾಗಲಿದ್ದಾರೆ. ನಾಗಪ್ಪ ಮಾಸ್ಟರ್ ಸ್ಮರಣಾರ್ಥ ಇಬ್ಬರು ಹೆಣ್ಣುಮಕ್ಕಳ ಸ್ವಾವಲಂಬಿ ಬದುಕಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಲಾಗುವುದು. ಕಲಬುರಗಿಯ ಸುಕಿ ಸಾಂಸ್ಕೃತಿಕ ತಂಡದಿಂದ ಅಮ್ಮನ ಹಾಡುಗಳ ಗಾಯನ ನಡೆಯಲಿದೆ’ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT