ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ

Published 24 ಆಗಸ್ಟ್ 2023, 16:14 IST
Last Updated 24 ಆಗಸ್ಟ್ 2023, 16:14 IST
ಅಕ್ಷರ ಗಾತ್ರ

ಚಿಂಚೋಳಿ: ತಾಲ್ಲೂಕಿನಲ್ಲಿ ಖಾಲಿಯಿರುವ 26 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 39 ಸಹಾಯಕಿಯರ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಿಸಲಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗುರುಪ್ರಸಾದ ತಿಳಿಸಿದ್ದಾರೆ.

ಇಲ್ಲಿನ ಚಂದಾಪುರದ ಶಿಶುಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ ಸೂಚನಾ ಫಲಕದಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿ ಲಗತ್ತಿಸಲಾಗಿದೆ. ಆಯ್ಕೆ ಸಮಿತಿಯಿಂದ ಅನುಮೋದನೆ ಪಡೆದ ಪಟ್ಟಿಯಲ್ಲಿರುವವರ ಆಯ್ಕೆಗೆ ಯಾರಾದಾದರೂ ಆಕ್ಷೇಪಣೆಗಳಿದ್ದರೆ ಸೆಪ್ಟೆಂಬರ್‌ 1ರ ಸಂಜೆ 5.30ರ ಒಳಗಾಗಿ ಸಂಬಂಧಪಟ್ಟ ದಾಖಲೆಗಳೊಂದಿಗೆ ಆಕ್ಷೆಪಣೆ ಸಲ್ಲಿಸಬಹುದಾಗಿದೆ. ನಂತರ ಬಂದ ಆಕ್ಷೇಪಣೆಗಳನ್ನು ಸ್ವೀಕರಿಸುವುದಿಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT