ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕುಸಿದ ಅಂಗನವಾಡಿ ಬಾಡಿಗೆ ಕಟ್ಟಡ: ತಪ್ಪಿದ ಅನಾಹುತ

Published 14 ಜೂನ್ 2024, 16:27 IST
Last Updated 14 ಜೂನ್ 2024, 16:27 IST
ಅಕ್ಷರ ಗಾತ್ರ

ವಾಡಿ: ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಅಂಗನವಾಡಿ ಕಟ್ಟಡ ಮಳೆಗೆ ಕುಸಿದು ಬಿದ್ದು ದೊಡ್ಡ ಅನಾಹುತ ತಪ್ಪಿದ ಘಟನೆ ವಾಡಿ ಪಟ್ಟಣದಲ್ಲಿ ಶುಕ್ರವಾರ ನಡೆದಿದೆ.

ಇಂದಿರಾ ಕಾಲೊನಿ ಬಡಾವಣೆಯಲ್ಲಿ ಕಳೆದ ಹಲವು ವರ್ಷಗಳಿಂದ ಬಾಡಿಗೆ ಕೋಣೆಯಲ್ಲಿ ಅಂಗನವಾಡಿ ಕೇಂದ್ರ ನಡೆಯುತ್ತಿತ್ತು. ಅಲ್ಲಿ 20 ಶಾಲಾ ಪೂರ್ವ ಮಕ್ಕಳ ದಾಖಲಾತಿ ಇದೆ. ಶುಕ್ರವಾರ ಮಧ್ಯಾಹ್ನ 2.30ಕ್ಕೆ ಮಳೆ ಸುರಿಯುತ್ತಿದ್ದಾಗ ಮನೆ ಕುಸಿದಿದೆ.

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಪ್ರತಿಭಟನೆ ಜೊತೆಗೆ ಅಂಗನವಾಡಿ ಕೇಂದ್ರಕ್ಕೆ ರಜೆ ನೀಡಲಾಗಿತ್ತು. ಇದರಿಂದ ದೊಡ್ಡ ಅನಾಹುತ ತಪ್ಪಿದೆ.

ಸುದ್ದಿ ತಿಳಿಯುತ್ತಲೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ವಿಜಯಲಕ್ಷಿ ಹೇರೂರು, ಹಿರಿಯ ಮೇಲ್ವಿಚಾರಕಿ ಮೀನಾಕ್ಷಿ ಗುಂಡುಗುರ್ತಿ ಹಾಗೂ ಸರನಾ ಭೇಟಿ ನೀಡಿ ತಕ್ಷಣ ಅಂಗನವಾಡಿ ಕೇಂದ್ರವನ್ನು ಸ್ಥಳಾಂತರ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT