ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರ್ಗಿ: ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರ ಪ್ರತಿಭಟನೆ

Last Updated 9 ನವೆಂಬರ್ 2020, 8:20 IST
ಅಕ್ಷರ ಗಾತ್ರ

ಕಲಬುರ್ಗಿ: ವಿವಿಧ ಬೇಡಿಕೆಗಳ ‌ಈಡೇರಿಕೆಗಾಗಿ ಸಿಐಟಿಯು ಕಾರ್ಮಿಕ ಸಂಘಟನೆ ಸಂಯೋಜಿತ ಅಂಗನವಾಡಿ ‌ಹಾಗೂ ಬಿಸಿಯೂಟ ಕಾರ್ಯಕರ್ತೆಯರು ಸೋಮವಾರ ‌ನಗರದ ಜಿಲ್ಲಾಧಿಕಾರಿ ‌ಕಚೇರಿ ಎದುರು ‌ಪ್ರತಿಭಟನೆ ನಡೆಸಿದರು.

ಅಂಗನವಾಡಿ ನೌಕರರಿಗೆ ₹ 21 ಸಾವಿರ ಕನಿಷ್ಠ ವೇತನ ನಿಗದಿಪಡಿಸಬೇಕು. ಮತ್ತು ಸೇವೆ ಕಾಯಂ ಮಾಡಬೇಕು. ₹ 10 ಸಾವಿರ‌ ನಿವೃತ್ತಿ ‌ವೇತನ ನೀಡಬೇಕು ‌ಎಂದು ಒತ್ತಾಯಿಸಿದರು.

ಅಂಗನವಾಡಿ ‌ಕೇಂದ್ರಗಳಲ್ಲಿ ಶಾಲಾ ಪೂರ್ವ ಪ್ರಾಥಮಿಕ ಶಿಕ್ಷಣ ‌ಕಡ್ಡಾಯಗೊಳಿಸಬೇಕು. ಹೆಚ್ಚುವರಿ ‌ಕೆಲಸವನ್ನು‌‌ ಹಚ್ಚಬಾರದು ಎಂದರು.

ನೂತನ ಶಿಕ್ಷಣ ನೀತಿ 2020ನ್ನು ಜಾರಿ ಮಾಡುವಾಗ ಬಿಸಿಯೂಟ ಯೋಜನೆಯನ್ನು ‌ಬಲಿಷ್ಟಪಡಿಸಬೇಕು. ಬಿಸಿಯೂಟ ‌ನೌಕರರಿಗೆ ಪ್ರತಿ ತಿಂಗಳು 5ನೇ ತಾರೀಖಿನ ಒಳಗೆ ವೇತನ ಪಾವತಿಯಾಗುವ ವ್ಯವಸ್ಥೆ ‌ಮಾಡಬೇಕು. ಬಿಸಿಯೂಟ ‌ಮಹಿಳೆಯರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು.

ಅಕ್ಷರ ದಾಸೋಹ ನೌಕರರ ಸಂಘದ ಗೌರವಾಧ್ಯಕ್ಷೆ ಗೌರಮ್ಮ ಪಾಟೀಲ, ಪ್ರಧಾನ ಕಾರ್ಯದರ್ಶಿ ವಿಜಯಲಕ್ಷ್ಮಿ ‌ಹಿರೇಮಠ, ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ರಾಜ್ಯ ಕಾರ್ಯಾಧ್ಯಕ್ಷೆ ಶಾಂತಾ ಘಂಟಿ, ಜಿಲ್ಲಾ ಕಾರ್ಯದರ್ಶಿ ಗಂಗಮ್ಮ ಬಿರಾದಾರ, ಖಜಾಂಚಿ ಮಹಾದೇವಿ ‌ಪೋಲಕಪಳ್ಳಿ, ಶೇಖಮ್ಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT