ಕಾಳಗಿ: ಧಾರ್ಮಿಕ ದತ್ತಿ ಇಲಾಖೆಯ ತಾಲ್ಲೂಕಿನ ಕೋರವಾರ ಹೊರವಲಯದ ಅಣಿವೀರಭದ್ರೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ಜಾತ್ರೆಯ ನಂತರದಲ್ಲಿ ಭಕ್ತರಿಂದ ಸಂಗ್ರಹವಾಗಿದ್ದ ಹುಂಡಿ ಹಣವನ್ನು ಗುರುವಾರ ಎಣಿಕೆ ಮಾಡಲಾಯಿತು.

ತಹಶೀಲ್ದಾರ್ ಹಾಗೂ ದೇವಸ್ಥಾನ ಸಮಿತಿ ಅಧ್ಯಕ್ಷ ಪೃಥ್ವಿರಾಜ್ ಪಾಟೀಲ ಸಮ್ಮುಖದಲ್ಲಿ ಕಂದಾಯ ಇಲಾಖೆ ಸಿಬ್ಬಂದಿ ಹುಂಡಿ ಪೆಟ್ಟಿಗೆ ತೆರೆದು ಭಕ್ತರ ಕಾಣಿಕೆಯ ಲೆಕ್ಕ ಮಾಡಿದರು.

₹11 ಲಕ್ಷ ₹20 ನಗದು ಮತ್ತು 70 ಗ್ರಾಂ ಬೆಳ್ಳಿ ಸಂಗ್ರಹವಾಗಿದ್ದು, ದೇವಸ್ಥಾನ ಸಮಿತಿಯ ಹೆಬ್ಬಾಳ ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಖಾತೆಗೆ ಜಮೆ ಮಾಡಿದರು.

ಕಂದಾಯ ನಿರೀಕ್ಷಕ ಮಂಜುನಾಥ ಮಹಾರುದ್ರ, ಕಾರ್ಯದರ್ಶಿ ಸಿದ್ದಲಿಂಗ ಕ್ಷೇಮಶೆಟ್ಟಿ ಸೇರಿದಂತೆ ಬ್ಯಾಂಕ್ ಮತ್ತು ಪೊಲೀಸ್ ಸಿಬ್ಬಂದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.