ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಲಬುರಗಿ | ನ್ಯಾಯಬೆಲೆ ಅಂಗಡಿ ಡೀಲರ್ ನೇಮಕಕ್ಕೆ ಅರ್ಜಿ ಆಹ್ವಾನ

Published 31 ಜನವರಿ 2024, 14:09 IST
Last Updated 31 ಜನವರಿ 2024, 14:09 IST
ಅಕ್ಷರ ಗಾತ್ರ

ಕಲಬುರಗಿ: ನಗರದ ಎಂ.ಎಸ್.ಕೆ. ಮಿಲ್–ಮಿಸ್ಬಾನಗರ ಹಾಗೂ ಹೀರಾನಗರ ಬಡಾವಣೆಗೆ ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲಾಗಿದ್ದು, ಡೀಲರ್‌ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಹಾಯಕ ನಿರ್ದೇಶಕರ ಕಚೇರಿಯಿಂದ ನಿಗದಿತ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ಫೆಬ್ರುವರಿ 28 ರೊಳಗೆ ಸಲ್ಲಿಸಬೇಕು ಎಂದಿದ್ದಾರೆ.

ಅರ್ಜಿ ನಮೂನೆ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT