ಶನಿವಾರ, 30 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಮಟ್ಟದ ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ

Published 12 ಜುಲೈ 2023, 14:31 IST
Last Updated 12 ಜುಲೈ 2023, 14:31 IST
ಅಕ್ಷರ ಗಾತ್ರ

ಕಲಬುರಗಿ: ಪ್ರಸಕ್ತ ಸಾಲಿಗೆ ರಾಜ್ಯಮಟ್ಟದ ಕೃಷಿ ಪ್ರಶಸ್ತಿಗಾಗಿ ಕಲಬುರಗಿ ಜಿಲ್ಲೆಯ ಆಸಕ್ತಿಯುಳ್ಳ ರೈತರು/ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತಿಯುಳ್ಳ ಜಿಲ್ಲೆಯ ರೈತರು/ ರೈತ ಮಹಿಳೆಯರು ಸಂಬಂಧಪಟ್ಟ ಆಯಾ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯದಿಂದ ನಿಗದಿತ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿ ಇದೇ ಕಚೇರಿಯಲ್ಲಿ ಜುಲೈ 24ರೊಳಗಾಗಿ ಅರ್ಜಿ ಸಲ್ಲಿಸಿ ಸ್ವೀಕೃತಿ ಪಡೆಯಬೇಕು. ನಿಗದಿತ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಕೃಷಿಯಲ್ಲಿ ರೈತ ಮಹಿಳೆಯರನ್ನು ಪ್ರೋತ್ಸಾಹಿಸಲು ಮತ್ತು ಕೃಷಿಯತ್ತ ಆಕರ್ಷಿಸಲು 2022-23ನೇ ಸಾಲಿನಿಂದ ರೈತ ಮಹಿಳೆಯರಿಗೆ ಪ್ರತ್ಯೇಕವಾಗಿ ಕೃಷಿ ಪ್ರಶಸ್ತಿ ಮತ್ತು ಕೃಷಿ ಪಂಡಿತ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಶಿಕ್ಷಕರ ವರ್ಗಾವಣೆ: ವೈದ್ಯಕೀಯ ಪರೀಕ್ಷೆ 14,15ಕ್ಕೆ

ಕಲಬುರಗಿ: ಜಿಲ್ಲೆಯ ಹೊರಗೆ/ಕಲಬುರಗಿ ವಿಭಾಗದ ಒಳಗೆ 2022-23ನೇ ಸಾಲಿನ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ವೈದ್ಯಕೀಯ ಮತ್ತು ಅಂಗವಿಕಲ ಆದ್ಯತೆಯ ಮೇಲೆ ಅಂತರ ಜಿಲ್ಲೆ ವರ್ಗಾವಣೆ ಬಯಸಿ ಅರ್ಜಿ ಸಲ್ಲಿಸಿರುವ ಶಿಕ್ಷಕರಿಗೆ ಜುಲೈ 14 ಹಾಗೂ 15ರಂದು ಇಲ್ಲಿನ ಜಿಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ ನಡೆಯಲಿದೆ.

ಎರಡೂ ದಿನ ಬೆಳಿಗ್ಗೆ 9 ಗಂಟೆಗೆ ಗುಲಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆಸ್ಪತ್ರೆ (ಜಿಲ್ಲಾ ಆಸ್ಪತ್ರೆ) ಹಳೆಯ ಕಟ್ಟಡ, ಯುಡಿಐಡಿ ವಿಭಾಗದ (ಕೊಠಡಿ ಸಂಖ್ಯೆ 101) ಅಂಗವಿಕಲ ವಿಭಾಗದಲ್ಲಿ ವೈದ್ಯಕೀಯ ಪರೀಕ್ಷೆಗೆ ಹಾಜರಾಗಬೇಕೆಂದು ಶಾಲಾ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತರ ಕಚೇರಿಯ ವಿಭಾಗೀಯ ಸಹ ನಿರ್ದೇಶಕರಾದ ಅಮಿತಾ ಯರಗೋಳಕರ್ ತಿಳಿಸಿದ್ದಾರೆ.

ಜುಲೈ 14ರಂದು ಒಟ್ಟು 67 ಪ್ರಾಥಮಿಕ ಶಾಲಾ ಶಿಕ್ಷಕರ ಹಾಗೂ ಜುಲೈ 15ರಂದು ಒಟ್ಟು 39 ಪ್ರೌಢ ಶಾಲಾ ಸಹ ಶಿಕ್ಷಕರ ವೈದ್ಯಕೀಯ ಪರೀಕ್ಷೆ ಜರುಗಲಿದೆ.

ವರ್ಗಾವಣೆಗಾಗಿ ಅರ್ಜಿ ಸಲ್ಲಿಸಿರುವ ಶಿಕ್ಷಕರು ವೈದ್ಯಕೀಯ ಪ್ರಮಾಣ ಪತ್ರ ಹಾಗೂ ಯುಡಿಐಡಿ (ವಿಶಿಷ್ಟ ಗುರುತಿನ ಚೀಟಿ) ಅಂಗವಿಕಲ ಪ್ರಮಾಣ ಪತ್ರದ ದಾಖಲಾತಿಗಳೊಂದಿಗೆ ಚಿಕಿತ್ಸೆ ಪಡೆದಿರುವ ದಾಖಲಾತಿ ಮತ್ತು ಇತರೆ ಎಲ್ಲಾ ದಾಖಲಾತಿಗಳ ಎರಡು ಪ್ರತಿ ಜೆರಾಕ್ಸ್ ಹಾಗೂ ಗುರುತಿನ ಪತ್ರಗಳ ದಾಖಲಾತಿಗಳೊಂದಿಗೆ ಮೇಲ್ಕಂಡ ದಿನದಂದು ನಡೆಯುವ ವೈದ್ಯಕೀಯ ಪರೀಕ್ಷೆಗೆ ಹಾಜರಾಗಬೇಕೆಂದು ಅವರು ತಿಳಿಸಿದ್ದಾರೆ.

ಸ್ಥಳ ಆಯ್ಕೆಗಾಗಿ ಕೌನ್ಸೆಲಿಂಗ್‌

ಕಲಬುರಗಿ: ಸರ್ಕಾರಿ ಪ್ರೌಢಶಾಲೆಗಳ ಗ್ರೂಪ್ ‘ಬಿ’ ಮುಖ್ಯ ಶಿಕ್ಷಕರು/ ತತ್ಸಮಾನ ವೃಂದದ ಅಧಿಕಾರಿಗಳ ಕೋರಿಕೆ ವರ್ಗಾವಣೆಗಳ ಮತ್ತು ನಿರ್ದಿಷ್ಟಪಡಿಸಿದ ಹುದ್ದೆಗಳಲ್ಲಿ ಕನಿಷ್ಠ ಸೇವೆ (3 ವರ್ಷ ಮೇಲ್ಪಟ್ಟು ಮತ್ತು 5 ವರ್ಷ ಒಳಗೆ) ಇರುವ ಅಧಿಕಾರಿಗಳಿಗೆ ಸ್ಥಳದ ಆಯ್ಕೆಯಾಗಿ ಜುಲೈ 25 ಹಾಗೂ 26ರಂದು ಕೌನ್ಸೆಲಿಂಗ್‌ ನಡೆಯಲಿದೆ.

ಅಂದು ಬೆಳಿಗ್ಗೆ 10 ಗಂಟೆಗೆ ಕಲಬುರಗಿ ಶಾಲಾ ಶಿಕ್ಷಣ ಇಲಾಖೆ ಹೆಚ್ಚುವರಿ ಆಯುಕ್ತರ ಕಚೇರಿಯಲ್ಲಿ ಕೌನ್ಸೆಲಿಂಗ್ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಆಹ್ವಾನ

ಕಲಬುರಗಿ: ಸೇಡಂ ಪುರಸಭೆ ಕಚೇರಿ ವ್ಯಾಪ್ತಿಯಲ್ಲಿ ಘನತ್ಯಾಜ್ಯ ವಸ್ತು ನಿರ್ವಹಣೆಗಾಗಿ ತಾಂತ್ರಿಕ ಕೌಶಲವುಳ್ಳ ವಿದ್ಯಾರ್ಥಿಯೊಬ್ಬರಿಗೆ ತರಬೇತಿ ನೀಡಬೇಕಾಗಿದೆ. ಇದಕ್ಕಾಗಿ ಅರ್ಹರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಇಂಟರ್ನಶಿಪ್‌ ಅವಧಿಯು ಕನಿಷ್ಠ 3 ತಿಂಗಳಿನಿಂದ ಗರಿಷ್ಠ 1 ವರ್ಷದವರೆಗೆ ಇರುತ್ತದೆ. ಅಭ್ಯರ್ಥಿಗಳು ಡಿಪ್ಲೊಮಾ ಇನ್ ಎಚ್‍ಐ/ ಯಾವುದೇ ಪದವಿ/ ಐಟಿಐ ಪಾಸಾಗಿರಬೇಕು. ಸ್ಥಳೀಯ ವಿದ್ಯಾರ್ಥಿಗಳಿಗೆ ಮೊದಲ ಆದ್ಯತೆ. ಸರ್ಕಾರದ ನಿಯಮಾನುಸಾರ ಸ್ಟೈಫಂಡ್ ಪಾವತಿಸಲಾಗುತ್ತದೆ. ಮಾಹಿತಿಗೆ ಸೇಡಂ ಪುರಸಭೆ ಕಚೇರಿಯ ಆರೋಗ್ಯ ಶಾಖೆಯಲ್ಲಿ ಕಚೇರಿ ವೇಳೆಯಲ್ಲಿ ಸಂಪರ್ಕಿಸಬೇಕೆಂದು ಸೇಡಂ ಪುರಸಭೆ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT