ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರ್ಗಿ | ಬೈಕ್‌ನಿಂದ ಬಿದ್ದು ಆಶಾ ಕಾರ್ಯಕರ್ತೆ ಸಾವು

Last Updated 15 ಮೇ 2020, 15:15 IST
ಅಕ್ಷರ ಗಾತ್ರ

ಕಲಬುರ್ಗಿ: ಜೇವರ್ಗಿ ತಾಲ್ಲೂಕಿನ ಮಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಶಾ ಕಾರ್ಯಕರ್ತೆಯಾಗಿ ಕಾರ್ಯನಿರ್ವಹಿಸುತ್ತಿದ್ದ ಶಾರದಾ ನಿಂಗಪ್ಪ (41) ಅವರು ಶುಕ್ರವಾರ ಬೈಕ್‌ನಿಂದ ಬಿದ್ದು ಸಾವಿಗೀಡಾದರು.

ಮಾಗಣಗೇರಾ ಗ್ರಾಮದ ಶಾರದಾ ಅವರು ಜೇವರ್ಗಿಯ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಗೆ ಪತಿಯೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಕೆಲ್ಲೂರು ಗ್ರಾಮದ ಬಳಿ ಬೈಕ್‌ ಅಪಘಾತವಾಗಿ ಕೆಳಗೆ ಬಿದ್ದಿದ್ದ ಅವರ ತಲೆಗೆ ಏಟಾಗಿತ್ತು. ಅವರನ್ನು ಕಲಬುರ್ಗಿಯ ಖಾಸಗಿ ಆಸ್ಪತ್ರೆಗೆ ಕರೆತರಲಾಯಿತು. ಅಲ್ಲಿಂದ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯುವಾಗ ಕೊನೆಯುಸಿರೆಳೆದರು. 12 ವರ್ಷಗಳಿಂದ ಆಶಾ ಕಾರ್ಯಕರ್ತೆಯಾಗಿ ಅವರು ಕೆಲಸ ಮಾಡುತ್ತಿದ್ದರು. ಅವರಿಗೆ ಪತಿ, ಇಬ್ಬರು ಪುತ್ರರು, ಪುತ್ರಿ ಇದ್ದಾರೆ.

ಪರಿಹಾರಕ್ಕೆ ಮನವಿ: ಕಳೆದ 12 ವರ್ಷಗಳಿಂದ ಆಶಾ ಕಾರ್ಯಕರ್ತೆಯಾಗಿ ಅಹರ್ನಿಶಿ ದುಡಿದ ಶಾರದಾ ಅವರಿಗೆ ಸರ್ಕಾರ ಕೊರೊನಾ ಸಂದರ್ಭದಲ್ಲಿ ಸಾವಿಗೀಡಾದರೆ ನೀಡುವ ಪರಿಹಾರವನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಕಲಬುರ್ಗಿ ಜಿಲ್ಲಾ ಆಶಾ ಕಾರ್ಯಕರ್ತೆಯರ ಸಂಘಟನೆಯ ಜಿಲ್ಲಾ ಸಂಚಾಲಕ ವಿ.ಜಿ.ದೇಸಾಯಿ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT