ರಾಯಚೂರು: ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಸೇರಿ ಮೂವರನ್ನು ವರ್ಗಾವಣೆ ಮಾಡಿದ್ದು, ರಾಯಚೂರು ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಅಶೋಕ ದುಡಗುಂಟಿ ಅವರನ್ನು ವರ್ಗಾವಣೆಗೊಳಿಸಲಾಗಿದೆ.

ರಾಯಚೂರು ಉಪ ವಿಭಾಗಾಧಿಕಾರಿಯಾಗಿ ಎಸ್.ಎಸ್. ಸಂಪಗಾವಿ ಅವರನ್ನು ಹಾಗೂ ಕಲಬುರಗಿ ಮಹಾನಗರ ಪಾಲಿಕೆಯ ಪರಿಷತ್ ಕಾರ್ಯದರ್ಶಿ ಮಲ್ಲೇಶ ತಂಗಾ ಅವರನ್ನು ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರನ್ನಾಗಿ ನೇಮಿಸಲಾಗಿದೆ.

ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಸ್ಥಳೀಯ ಜಿಲ್ಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಉನ್ನತ ಅಧಿಕಾರಿಗಳನ್ನು ಬೇರೆ ಜಿಲ್ಲೆಗಳಿಗೆ ವರ್ಗಾವಣೆ ಮಾಡಬೇಕು ಎಂಬ ಸೂಚನೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಸಚಿವಾಲಯ ವರ್ಗಾವಣೆ ಮಾಡಿದೆ. ರಾಯಚೂರು ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿದ್ದ ದುರ್ಗೇಶ ಅವರಿಗೆ ಯಾವುದೇ ಹುದ್ದೆಯನ್ನು ತೋರಿಸಿಲ್ಲ.

ರಾಯಚೂರು ಉಪ ವಿಭಾಗಾಧಿಕಾರಿ ಮೆಹಬೂಬ್‌ಬಿ ಅವರನ್ನು ಚಿಕ್ಕೋಡಿ ಉಪ ವಿಭಾಗಾಧಿಕಾರಿಯಾಗಿ ಹಾಗೂ ಮೆಹಬೂಬ್ ಜಿಲಾನ್ ಅವರನ್ನು ಕಲಬುರಗಿ ಮಹಾನಗರ ಪಾಲಿಕೆಯ ಪರಿಷತ್ ಕಾರ್ಯದರ್ಶಿ ಮಲ್ಲೇಶ ತಂಗಾ ಅವರ ಸ್ಥಾನಕ್ಕೆ ವರ್ಗಾಯಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.