ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚಂದ್ರಶೇಖರ ಪಾಟೀಲ ಪರ ಮತಯಾಚನೆ

ನಿರುದ್ಯೋಗ ಸಮಸ್ಯೆ ವಿರುದ್ಧ ಸಮರ ಸಾರಿದ್ದೆ ಕಾಂಗ್ರೆಸ್: ದೀಪಕನಾಗ್ ಪುಣ್ಯಶೆಟ್ಟಿ
Published 25 ಮೇ 2024, 16:06 IST
Last Updated 25 ಮೇ 2024, 16:06 IST
ಅಕ್ಷರ ಗಾತ್ರ

ಚಿಂಚೋಳಿ: ‘ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಆದರೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಷ್ಟ್ರಮಟ್ಟದಲ್ಲಿ ನಿರುದ್ಯೋಗ ಸಮಸ್ಯೆ ಪ್ರಸ್ತಾಪಿಸಿ ಬಿಜೆಪಿಯಲ್ಲಿ ನಡುಕ ಹುಟ್ಟಿಸಿದ್ದಾರೆ’ ಎಂದು ಜಿ.ಪಂ ಮಾಜಿ ಅಧ್ಯಕ್ಷ ದೀಪಕನಾಗ ಪುಣ್ಯಶೆಟ್ಟಿ ತಿಳಿಸಿದರು.

ಇಲ್ಲಿನ ವೀರೇಂದ್ರ ಪಾಟೀಲ ಪಬ್ಲಿಕ್ ಶಾಲೆ ಜಹಾಗೀರದಾರ ಸಭಾಂಗಣದಲ್ಲಿ ಶುಕ್ರವಾರ ನಡೆದ ವಿಧಾನ ಪರಿಷತ್ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ ಪಾಟೀಲ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.

‘ಬಿಜೆಪಿ ತನ್ನ ತಪ್ಪು ಆರ್ಥಿಕ ನೀತಿಯಿಂದ ಉದ್ಯೋಗ ಕಡಿತಗೊಂಡಿವೆ. ಜತೆಗೆ ಹೊಸ ಉದ್ಯೋಗ ಸೃಷ್ಟಿಯಾಗಿಲ್ಲ. ಇದರಿಂದ ನಿರುದ್ಯೋಗ ಪ್ರಮಾಣ ಹೆಚ್ಚಾಗಿದ್ದು, ಯುವಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ ಕರ್ನಾಟಕ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆ ಭಾಗವಾಗಿ ಯುವನಿಧಿ ಮೂಲಕ ನಿರುದ್ಯೋಗಗಿಗಳ ಹಿತರಕ್ಷಿಸಿದೆ’ ಎಂದು ಹೇಳಿದರು.

ಕೆಪಿಸಿಸಿ ಉಪಾಧ್ಯಕ್ಷ ಸುಭಾಷ ರಾಠೋಡ ಮಾತನಾಡಿ, ‘ದೇಶದಲ್ಲಿ ಬಿಜೆಪಿ ವಿರುದ್ಧ ವಾತಾವರಣ ಗಟ್ಟಿಯಾಗತೊಡಗಿದ್ದು, ಕಾಂಗ್ರೆಸ್ ಪರ ಅಲೆ ಸೃಷ್ಟಿಯಾಗಿದೆ. ಯುವಕರಿಂದಲೇ ಅಧಿಕಾರಕ್ಕೆ ಬಂದು 10 ವರ್ಷಗಳಿಂದ ದೇಶದಲ್ಲಿ ಬಿಜೆಪಿ ಆಳ್ವಿಕೆ ನಡೆಸಿದರು ಯುವಜನರನ್ನು ನಿರ್ಲಕ್ಷಿಸಿದ ಬಿಜೆಪಿಗೆ ಪಾಠ ಕಲಿಸಬೇಕು ಎಂದು ಮನವಿ ಮಾಡಿದರು.

ಮುಖಂಡರಾದ ಬಾಬುರಾವ ಪಾಟೀಲ, ರೇವಣಸಿದ್ದಪ್ಪ ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಮಾಲಿ, ಕೋಡ್ಲಿ-ಕಾಳಗಿ ಘಟಕದ ಅಧ್ಯಕ್ಷ ದೇವೇಂದ್ರಪ್ಪ ಹೆಬ್ಬಾಳ, ಅಬ್ದುಲ್ ಬಾಷೀತ, ಲಕ್ಷ್ಮಣ ಆವುಂಟಿ, ಶರಣು ಪಾಟೀಲ ಮೋತಕಪಳ್ಳಿ ಮೊದಲಾದವರು ಮಾತನಾಡಿದರು.

ಮುಖಂಡರಾದ ಲಿಂಗಶೆಟ್ಟಿ ತಟ್ಟೆಪಳ್ಳಿ, ರಾಮಶೆಟ್ಟಿ ಪವಾರ, ಬಸವರಾಜ ಕೋಲಕುಂದಿ, ಸಯ್ಯದ್ ಶಬ್ಬೀರ್ ಅಹಮದ್, ಅನ್ವರ್ ಖತೀಬ್, ಶ್ರೀನಿವಾಸ ಬಂಡಿ, ಅಜೀತ ಪಾಟೀಲ, ವೀರಶೆಟ್ಟಿ ಪಾಟೀಲ, ತುಕಾರಾಮ ಪವಾರ್, ಪ್ರಭುಲಿಂಗ ಲೇವಡಿ ಸೇರಿದಂತೆ ಅನೇಕರು ಹಾಜರಿದ್ದರು.

ಬಸವರಾಜ ಮಾಲಿ ಅಧ್ಯಕ್ಷರು ಬ್ಲಾಕ್ ಕಾಂಗ್ರೆಸ್ ಚಿಂಚೋಳಿ
ಬಸವರಾಜ ಮಾಲಿ ಅಧ್ಯಕ್ಷರು ಬ್ಲಾಕ್ ಕಾಂಗ್ರೆಸ್ ಚಿಂಚೋಳಿ

Quote - ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ ಪಾಟೀಲ ಗೆಲುವಿಗೆ ಎಲ್ಲರೂ ಶಕ್ತಿಮೀರಿ ಶ್ರಮಿಸಬೇಕು. ನಿರುದ್ಯೋಗ ಸಮಸ್ಯೆಯ ವಿರುದ್ಧ ಯುವಜನರು ಬಿಜೆಪಿಗೆ ಪಾಠ ಕಲಿಸಬೇಕು ಬಸವರಾಜ ಮಾಲಿ ಅಧ್ಯಕ್ಷ ಬ್ಲಾಕ್ ಕಾಂಗ್ರೆಸ್ ಚಿಂಚೋಳಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT