ಸೋಮವಾರ, ಜೂನ್ 21, 2021
29 °C

ಸಹಾಯಕ ನಿರ್ದೇಶಕ ನಂದಿಕೂರ ಅಮಾನತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಸೇಡಂನಲ್ಲಿ ಭಾನುವಾರ ಭಾಗವಹಿಸಿದ್ದ ಇಲಾಖೆಯ ಕಾರ್ಯಕ್ರಮಕ್ಕೆ ಗೈರಾಗುವ ಮೂಲಕ ಕರ್ತವ್ಯ ಲೋಪ ಎಸಗಿದ ಕಾರಣಕ್ಕಾಗಿ ಇಲಾಖೆಯ ಸೇಡಂ ತಾಲ್ಲೂಕಿನ ಸಹಾಯಕ ನಿರ್ದೇಶಕ (ಗ್ರೇಡ್–2) ಶಶಿಕಾಂತ ನಂದಿಕೂರ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಇಲಾಖೆ ಆಯುಕ್ತ ಹಾಗೂ ಶಿಸ್ತು ಪ್ರಾಧಿಕಾರದ ಮುಖ್ಯಸ್ಥ ಡಾ. ರವಿಕುಮಾರ ಸುರಪುರ ಆದೇಶ ಹೊರಡಿಸಿದ್ದಾರೆ.

ಸಮಾಜ ಕಲ್ಯಾಣ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆಯಿಂದ ಕೈಗೆತ್ತಿಕೊಂಡ ವಿವಿಧ ಕಾಮಗಾರಿಗಳ ಉದ್ಘಾಟನೆಗಾಗಿ ಕಾರಜೋಳ ಅವರು ಸೇಡಂ ಪಟ್ಟಣಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಇಲಾಖೆಯ ಮಾಹಿತಿ ನೀಡಬೇಕಿದ್ದ ನಂದಿಕೂರ ಸ್ಥಳಕ್ಕೆ ಬಂದಿರಲಿಲ್ಲ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.