ಸೇಡಂ (ಕಲಬುರ್ಗಿ ಜಿಲ್ಲೆ): ಜಿಲ್ಲೆಯ ಸೇಡಂ ತಾಲ್ಲೂಕಿನ ಕೋಲಕುಂದಾ ದೊಡ್ಡ ತಾಂಡಾದಲ್ಲಿ ಕೋವಿಡ್-19 ಸೋಂಕಿತ ಯುವತಿಯನ್ನು ಕರೆದೊಯ್ಯುವ ವೇಳೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗೆ ಗಾಯವಾಗಿದೆ. ಆಂಬುಲೆನ್ಸ್ ಗಾಜನ್ನು ಒಡೆದಿದ್ದಾರೆ.

ತಾಂಡಾದ 17 ವರ್ಷದ ಬಾಲಕಿಗೆ ಸೋಂಕು ತಗುಲಿದೆ. ಆಕೆಯನ್ನು ಕರೆತರಲು ಆರೋಗ್ಯ ಸಿಬ್ಬಂದಿ ಪೊಲೀಸರ ಸಹಾಯದೊಂದಿಗೆ ತಾಂಡಾಕ್ಕೆ ತೆರಳಿದಾಗ ಗ್ರಾಮಸ್ಥರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಇದೇ ವೇಳೆ ಗ್ರಾಮದ ವ್ಯಕ್ತಿಯ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಇದರಿಂದ ರೊಚ್ಚಿಗೆದ್ದ ನೂರಾರು ಜನ ಕಲ್ಲು, ದೊಣ್ಣೆಗಳಿಂದ ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ.

ಇತ್ತೀಚೆಗೆ ಕಮಲಾಪುರ ತಾಲ್ಲೂಕಿನ ಮರಮಂಚಿ ತಾಂಡಾದಲ್ಲಿಯೂ ಘರ್ಷಣೆ ನಡೆದು, ಆಂಬುಲೆನ್ಸ್ನ ಗಾಜುಗಳನ್ನು ಒಡೆದು ಹಾಕಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.