ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವರದಿಗಾರನ ಮೇಲೆ ಹಲ್ಲೆ; ಕ್ರಮಕ್ಕೆ ಆಗ್ರಹ

Last Updated 9 ಏಪ್ರಿಲ್ 2019, 9:19 IST
ಅಕ್ಷರ ಗಾತ್ರ

ಕಲಬುರ್ಗಿ: ‘ಅಂಬಿಗರ ನ್ಯೂಸ್ ವಾಹಿನಿ ವರದಿಗಾರ ಅಂಬರೀಷ್ ಕಾಮನಕೇರಿ ಅವರ ಮೇಲೆ ಹಲ್ಲೆ ಮಾಡಿರುವ ಆರೋಪಿಗಳ ಮೇಲೆ ಕಾನೂನು ಕ್ರಮಕೈಗೊಳ್ಳಬೇಕು’ ಎಂದು ಕರ್ನಾಟಕ ರಾಜ್ಯ ಟೋಕರೆಕೋಲಿ–ಕಬ್ಬಲಿಗ–ಅಂಬಿಗರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಸವರಾಜ ಹರವಾಳ ಆಗ್ರಹಿಸಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಯಚೂರು ಜಿಲ್ಲೆ ಲಿಂಗಸುಗೂರು ತಾಲ್ಲೂಕು ರೋಡಲಬಂಡಾ ಗ್ರಾಮದ ಅಂಬರೀಷ್ ಮೇಲೆ 4–5 ಜನರು ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಅವರೀಗ ಕೋಮಾದಲ್ಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ರಾಜ್ಯದಾದ್ಯಂತ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ’ ಎಂದರು.

ಸಂಘಟನಾ ಕಾರ್ಯದರ್ಶಿ ಅವ್ವಣ್ಣಗೌಡ ಪೊಲೀಸ್‌ ಪಾಟೀಲ ಮಾತನಾಡಿ, ‘₹1.25 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ಸಿ.ಸಿ ರಸ್ತೆ ಕಾಮಗಾರಿ ಕಳಪೆಯಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದರು. ಅದನ್ನು ಆಧರಿಸಿ ಅಂಬರೀಷ್ ಸುದ್ದಿ ಬಿತ್ತರಿಸಿದ್ದರು. ಹೀಗಾಗಿ ಅವರ ಮೇಲೆ ಹಲ್ಲೆ ನಡೆದಿದೆ. ಇಷ್ಟೇ ಅಲ್ಲ, ಆಸ್ಪತ್ರೆಗೆ ಬಂದ ಪಿಎಸ್‌ಐ ದಾದಾವಲಿ ಅವರು ದೂರು ನೀಡದಂತೆ ಅಂಬರೀಷ್ ಅವರಿಗೆ ಬೆದರಿಕೆ ಹಾಕಿದ್ದಾರೆ. ಆದ್ದರಿಂದ ಅವರ ವಿರುದ್ಧವೂ ಕ್ರಮಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ನೋಂದಣಿಗೆ ಸಲಹೆ: ಬಸವರಾಜ ಹರವಾಳ ಮಾತನಾಡಿ, ‘ಸಂಘದ ಸದಸ್ಯತ್ವ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಆಜೀವ ಸದಸ್ಯತ್ವ ಕೂಡ ಪಡೆಯಬಹುದಾಗಿದೆ. ಆದ್ದರಿಂದ ಸಮಾಜದ ಬಂಧುಗಳು ಈ ಬಗ್ಗೆ ಗಮನಹರಿಸಬೇಕು’ ಎಂದು ಮನವಿ ಮಾಡಿದರು.

ಸಂಘದ ಕಾರ್ಯಾಧ್ಯಕ್ಷ ರೇವಣಸಿದ್ದಪ್ಪ ಹಲಚೇರಿಕರ್, ಉಪಾಧ್ಯಕ್ಷರಾದ ಸಾಯಿಬಣ್ಣ ಗುರುಮಠಕಲ್, ಜಂಟಿ ಕಾರ್ಯದರ್ಶಿ ಬಸವರಾಜ ಗುಂಡಲಗೇರಾ, ಮಲ್ಲಿಕಾರ್ಜುನ ಸುರಪುರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT