ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

118 ಪಿಎಸ್ಐ ಪ್ರಶಿಕ್ಷಣಾರ್ಥಿಗಳಿಂದ ಆಕರ್ಷಕ ಪಥಸಂಚಲನ

Last Updated 8 ಫೆಬ್ರುವರಿ 2021, 4:58 IST
ಅಕ್ಷರ ಗಾತ್ರ

ಕಲಬುರ್ಗಿ: ನಗರದ ಹೊರವಲಯದ ನಾಗನಹಳ್ಳಿಯಲ್ಲಿರುವ ಪೊಲೀಸ್ ತರಬೇತಿ ಮಹಾವಿದ್ಯಾಲಯದ ಕ್ರೀಡಾಂಗಣದಲ್ಲಿ 3ನೇ ತಂಡದ 118 ಜನ ಅಬಕಾರಿ ಪಿಎಸ್ಐ ಪ್ರಶಿಕ್ಷಣಾರ್ಥಿಗಳು ಆಕರ್ಷಕ ‌ಪಥಸಂಚಲನ ನಡೆಸಿದರು.

ಆರು ತಿಂಗಳ ತರಬೇತಿ ಅವಧಿಯಲ್ಲಿ ವಿವಿಧ ಕ್ರೀಡೆಗಳಲ್ಲಿ ಉತ್ತಮ ಸಾಧನೆ ಮಾಡಿದ ಪಿಎಸ್ಐ ಪ್ರಶಿಕ್ಷಣಾರ್ಥಿ ಮ್ಯಾಥ್ಯೂ‌ ಕಾರ್ಲೊ ಅವರಿಗೆ ಅಬಕಾರಿ ಇಲಾಖೆ ಹೆಚ್ಚುವರಿ ಆಯುಕ್ತ (ತಪಾಸಣೆ) ವೆಂಕಟರಾಜನ್ ಟ್ರೋಫಿ ವಿತರಿಸಿದರು.

ಎಂ.ಎಸ್ಸಿ, ಎಂ.ಟೆಕ್, ಬಿಬಿಎ, ಬಿ.ಇಡಿ, ಬಿ. ಫಾರ್ಮಾ ಓದಿದವರು ಇಲ್ಲಿ ಆಯ್ಕೆಯಾಗಿ ತರಬೇತಿ ‌ಮುಗಿಸಿದರು.

118 ಪ್ರಶಿಕ್ಷಣಾರ್ಥಿಗಳ‌ ಪೈಕಿ 77 ಪುರುಷರು, 41 ಮಹಿಳೆಯರಿದ್ದರು.
ಇವರ ಪೈಕಿ ಐವರು ಮಾಜಿ ಸೈನಿಕರಿದ್ದಾರೆ.

ಪೊಲೀಸ್ ತರಬೇತಿ ಶಾಲೆ ಪ್ರಾಂಶುಪಾಲ ಯಡಾ ಮಾರ್ಟಿನ್ ‌ಮಾರ್ಬನ್ಯಾಂಗ್, ಎಸ್ಪಿ ಡಾ. ಸಿಮಿ ಮರಿಯಮ್ ಜಾರ್ಜ್, ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಡಿ. ಕಿಶೋರಬಾಬು, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಎಂ. ಕೂರ್ಮರಾವ್, ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ್ ಲೋಖಂಡೆ ಇದ್ದರು.

ಯಡಾ‌ ಮಾರ್ಟಿನ್ ‌ಮಾರ್ಬನ್ಯಾಂಗ್ ವರದಿ ವಾಚನ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT