ಕಲಬುರ್ಗಿ: ಹಿರಿಯ ಲೇಖಕ, ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಗವೀಶ ಹಿರೇಮಠ (74) ಅವರು ಗುರುವಾರ ಬೆಂಗಳೂರಿನಲ್ಲಿ ನಿಧನರಾದರು. ಅವರಿಗೆ ಪತ್ನಿ, ಪುತ್ರ ಇದ್ದಾರೆ.

ಧಾರವಾಡದ ಕರ್ನಾಟಕ ವಿ.ವಿ.ಯ ಕೇಂದ್ರ ಗ್ರಂಥಾಲಯದಲ್ಲಿ ಗ್ರಂಥಾಲಯಾಧಿಕಾರಿ ಸೇವೆಗೆ ಸೇರಿದ ಹಿರೇಮಠ ಅವರು ನಂತರ ಗುಲಬರ್ಗಾ ವಿ.ವಿ.ಯ ಗ್ರಂಥಾಲಯ ವಿಭಾಗಕ್ಕೆ ವರ್ಗಾವನೆಯಾಗಿ 2004ರಲ್ಲಿ ನಿವೃತ್ತಿಯಾಗಿದ್ದರು. ಕಾವ್ಯ, ಕಾದಂಬರಿ, ಚರಿತ್ರೆ, ನಾಟಕ ಮತ್ತು ಅಭಿನಂದನಾ ಗ್ರಂಥ ಸೇರಿದಂತೆ ಸುಮಾರು 50ಕ್ಕೂ ಹೆಚ್ಚು ಕೃತಿಗಳನ್ನು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಕೊಟ್ಟಿದ್ದಾರೆ.

ಎರಡು ತಿಂಗಳ ಹಿಂದೆ ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಆಸ್ಪತ್ರೆಗೆ ಸೇರಿಸಲಾಗಿತ್ತು. ಆಗಸ್ಟ್ 14ರಂದು ಬೆಳಿಗ್ಗೆ 10ರ ಸುಮಾರಿಗೆ ಕೊಪ್ಪಳ ಜಿಲ್ಲೆಯ ಸ್ವಗ್ರಾಮ ಬಿಸರಳ್ಳಿಯಲ್ಲಿ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.