ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರವಾನಗಿ ಇಲ್ಲದ ಆಟೊಗಳ ವಿರುದ್ಧ ಕ್ರಮಕ್ಕೆ ಒತ್ತಾಯ

Last Updated 22 ಸೆಪ್ಟೆಂಬರ್ 2020, 13:12 IST
ಅಕ್ಷರ ಗಾತ್ರ

ಕಲಬುರ್ಗಿ: ಪರವಾನಗಿ ಇಲ್ಲದ ಆಟೊಗಳು ನಗರದಲ್ಲಿ ಸಂಚರಿಸುತ್ತಿದ್ದು, ಅಂಥ ಆಟೊಗಳ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕಲ್ಯಾಣ ಕರ್ನಾಟಕ ಆಟೊ ಚಾಲಕರ ಸಂಘದ ಸದಸ್ಯರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ತಾಲ್ಲೂಕು ಪರವಾನಗಿ ಹೊಂದಿರುವ ಹಾಗೂ ಒಂದೇ ಸಂಖ್ಯೆ ಎರಡು, ಮೂರು ಆಟೊಗಳು ನಗರದಲ್ಲಿ ಅನಧಿಕೃತವಾಗಿ ಸಂಚರಿಸುತ್ತಿವೆ. ಇದರಿಂದ ಅಧಿಕೃತ ಪರವಾನಗಿ ಹೊಂದಿರುವ ಆಟೊಗಳ ಮಾಲೀಕರು ಹಾಗೂ ಚಾಲಕರ ಉಪಜೀವನಕ್ಕೆ ಕಷ್ಟವಾಗುತ್ತಿದೆ. ಅಲ್ಲದೇ ಬ್ಯಾಂಕುಗಳು ಮತ್ತು ರಾಷ್ಟ್ರೀಕೃತ ಬ್ಯಾಂಕುಗಳಿಂದ ಸಾಲ ತಂದು ಆಟೊ ಖರೀದಿಸಿದವರು ಮಾಸಿಕ ಕಂತು ಪಾವತಿಗೆ ಪರದಾಡುತ್ತಿದ್ದಾರೆ. ಆದ್ದರಿಂದ ಇಂತಹ ಪರವಾನಗಿ ಇಲ್ಲದ ಆಟೊಗಳನ್ನು ಜಪ್ತಿ ಮಾಡಬೇಕು. ಈ ಬಗ್ಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಸಮಸ್ಯೆ ಬಗೆಹರಿದಿಲ್ಲ. ಈಗಲಾದರೂ ಸಮಸ್ಯೆ ಬಗೆಗರಿಸಲು ಮುಂದಾಗಬೇಕು. ಇಲ್ಲದಿದ್ದರೆ ಧರಣಿ ಸತ್ಯಾಗ್ರಹ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

ಸಂಘದ ಅಧ್ಯಕ್ಷ ಲಕ್ಷ್ಮಿಕಾಂತ ಆರ್. ಮಾಲಿಪಾಟೀಲ, ಉಪಾಧ್ಯಕ್ಷ ಸಂಜುಕುಮಾರ ಸಿ. ದಸ್ತಾಪೂರ ಹಾಗೂ ಸದಸ್ಯರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT