ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಹಾರ ಪದ್ಧತಿ ಜಾಗೃತಿ ಅವಶ್ಯ :ಆರೋಗ್ಯ ಶಿಕ್ಷಣಾಧಿಕಾರಿ ಬಾಲಪ್ಪ ನಾಯಕ

ಅಪೌಷ್ಟಿಕತೆ ನಿವಾರಣೆಯ ಮಾಹಿತಿ ಕಾರ್ಯಾಗಾರ
Last Updated 24 ಡಿಸೆಂಬರ್ 2019, 13:59 IST
ಅಕ್ಷರ ಗಾತ್ರ

ಮಾನ್ವಿ: ‘ಮಕ್ಕಳಲ್ಲಿ ಅಪೌಷ್ಟಿಕತೆ ನಿವಾರಣೆಗೆ ತಾಯಂದಿರು ಹಾಗೂ ಗರ್ಭಿಣಿಯರಿಗೆ ಆಹಾರ ಪದ್ಧತಿ ಕುರಿತು ಜಾಗೃತಿ ಅವಶ್ಯ’ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಾಲಪ್ಪ ನಾಯಕ ಹೇಳಿದರು.

ಸೋಮವಾರ ಪಟ್ಟಣದ ವೆಂಕಟೇಶ್ವರ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ರಾಜ್ಯ ಘಟಕ, ಗುಲಬರ್ಗಾ ವಿಶ್ವವಿದ್ಯಾಲಯದ ಎನ್‌ಎಸ್‌ಎಸ್‌ ಘಟಕ ಹಾಗೂ ಯುನಿಸೆಫ್‌ ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಎನ್ಎಸ್‌ಎಸ್‌ ಸ್ವಯಂ ಸೇವಕರಿಗೆ ಅಪೌಷ್ಟಿಕತೆ ನಿವಾರಣೆಯ ಮಾಹಿತಿ ಕಾರ್ಯಗಾರದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.

‘ಪ್ರಸ್ತುತ ದಿನಗಳಲ್ಲಿ ಹಸಿವು ಹಾಗೂ ಅಪೌಷ್ಟಿಕತೆ ಜಾಗತಿಕ ಮಟ್ಟದ ಜ್ವಲಂತ ಸಮಸ್ಯೆಗಳಾಗಿ ಪರಿಣಮಿಸಿವೆ. ಅಪೌಷ್ಟಿಕತೆ ನಿವಾರಣೆಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳಬೇಕು. ತಾಯಂದಿರು, ಗರ್ಭಿಣಿಯರು, ಬಾಣತಿಯರು ಪೌಷ್ಟಿಕಾಂಶಯುಕ್ತ ಆಹಾರ ಸೇವನೆಗೆ ಗಮನಹರಿಸಬೇಕು’ ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲ ಕೆ.ಅಜೇಯಕುಮಾರ ಮಾತನಾಡಿ,‘ ಗ್ರಾಮೀಣ ಪ್ರದೇಶಗಳಲ್ಲಿ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ಸಂಘ ಸಂಸ್ಥೆಗಳು ಅಪೌಷ್ಟಿಕತೆ ಕುರಿತು ಜನಜಾಗೃತಿ ಮೂಡಿಸಬೇಕು’ ಎಂದರು.

ಎನ್‌ಎಸ್‌ಎಸ್‌ ಸ್ವಯಂ ಸೇವಕರಿಗೆ ಅಪೌಷ್ಟಿಕತೆ ನಿವಾರಣೆಯ ಮಾಹಿತಿ ಪುಸ್ತಕಗಳನ್ನು ವಿತರಿಸಲಾಯಿತು.

ಎನ್ಎಸ್ಎಸ್ ಆಧಿಕಾರಿ ಸಿದ್ದಪ್ಪ ಅಮರವಾತಿ, ಪ್ರೌಢಶಾಲೆಯ ಮುಖ್ಯಶಿಕ್ಷಕ ವೆಂಕಟೇಶ ಬೋನಾಸಿ, ಉಪನ್ಯಾಸಕರಾದ ಶಂಕ್ರಪ್ಪ ಅಂಗಡಿ, ಮಹಾದೇವ, ಹನುಮೇಶ, ಮಂಜುನಾಥ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT