ಶನಿವಾರ, ಜನವರಿ 23, 2021
20 °C

ಶಾಲೆ ಆರಂಭ ಕುರಿತು ಸರ್ಕಾರ ಸ್ಪಷ್ಟ ನಿರ್ಧಾರ ಕೈಗೊಳ್ಳಲಿ: ಬಿ.ಆರ್. ಪಾಟೀಲ ಆಗ್ರಹ

‍ಪ್ರಜಾವಾಣಿ ವಾರ್ತೆ‌ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ಶಾಲಾ ಕಾಲೇಜುಗಳ ಆರಂಭಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಮುಖಂಡ, ಮಾಜಿ ಶಾಸಕ ಬಿ.ಆರ್.ಪಾಟೀಲ ಒತ್ತಾಯಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಲೆಗಳ ಆರಂಭ ಕುರಿತಂತೆ ಸರ್ಕಾರ ಸ್ಪಷ್ಟ ಆದೇಶ ನೀಡುತ್ತಿಲ್ಲ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಆರೋಗ್ಯ ಸಚಿವ ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮತ್ತು ಪ್ರಾಥಮಿಕ ಶಿಕ್ಷಣ ಸಚಿವ ಎಸ್‌. ಸುರೇಶಕುಮಾರ್ ಎಲ್ಲರೂ ವಿಭಿನ್ನ ಹೇಳಿಕೆ ನೀಡುತ್ತಿದ್ದಾರೆ. ಈ ಸರ್ಕಾರದಲ್ಲಿ ಸಮನ್ವಯತೆಯೇ ಇಲ್ಲ’ ಎಂದು ಟೀಕಿಸಿದರು.

‘ಶಿಕ್ಷಣ ಇಲಾಖೆ ಆದೇಶದಲ್ಲಿ ತಜ್ಞರ ಸಮಿತಿ ನೀಡಿದ ಸಲಹೆಗಳನ್ನು ಕಡೆಗಣಿಸಲಾಗಿದೆ. ಬಹು
ತೇಕ ಶಾಲೆಗಳನ್ನು ಸ್ಯಾನಿಟೈಸ್ ಮಾಡಿಲ್ಲ. ವಿದ್ಯಾರ್ಥಿಗಳಿಗೆ ಸೋಪು, ಸ್ಯಾನಿಟೈಸರ್ ವಿತರಿಸುವ ಕೆಲಸ ಆಗಿಲ್ಲ. ಪಠ್ಯಕ್ರಮವನ್ನು ಕಡಿಮೆ ಮಾಡಿ ಬೋಧಿಸಬೇಕೇ ಎಂಬುದರ ಬಗ್ಗೆ ಸ್ಪಷ್ಟತೆಯಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಅತಂತ್ರ ಸ್ಥಿತಿಗೆ ಸಿಲುಕಿದ್ದಾರೆ’ ಎಂದು ಅವರು
ತಿಳಿಸಿದರು.

‘ಶಿಕ್ಷಣ ಸಚಿವರು ವಾಟ್ಸ್ಆ್ಯಪ್, ಫೇಸ್‌ಬುಕ್ ಮೂಲಕ ಸೂಚನೆ ನೀಡುತ್ತಿದ್ದಾರೆ. ಸೂಕ್ತ ರೀತಿಯಲ್ಲಿ ಇಲಾಖೆಯನ್ನು ಮುನ್ನಡೆಸದೇ ಬೇಜವಾಬ್ದಾರಿ ತೋರುತ್ತಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿರುವ ಪ್ರಾಥಮಿಕ ಶಿಕ್ಷಣ ಸಚಿವ ಸುರೇಶಕುಮಾರ್ ಕೂಡಲೇ ರಾಜೀನಾಮೆ ನೀಡಬೇಕು’ ಎಂದು ಒತ್ತಾಯಿಸಿದರು.

‘ವಿದ್ಯಾರ್ಥಿಗಳಿಗೆ ಸೋಪು, ಸ್ಯಾನಿಟೈಸರ್ ಕೊಡುವ ವ್ಯವಸ್ಥೆ ಮಾಡಬೇಕು. ಎಲ್ಲಾ ಶಾಲೆಗಳನ್ನು ಸ್ಯಾನಿಟೈಸ್ ಮಾಡಬೇಕು. ಕೋವಿಡ್ ಪರೀಕ್ಷೆ ಸಾಮರ್ಥ್ಯವನ್ನು ಹೆಚ್ಚಿಸಬೇಕು’ ಎಂದು ಅವರು ಒತ್ತಾಯಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು