ಕಲಬುರಗಿ: ಯಾದಗಿರಿ ಜಿಲ್ಲೆ ಗುರುಮಠಕಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಾಬುರಾವ ಚಿಂಚನಸೂರ ಅವರ ಕಾರು ಶುಕ್ರವಾರ ರಾತ್ರಿ ನಗರದ ಆಕಾಶವಾಣಿ ಕೇಂದ್ರದ ಬಳಿ ಅಪಘಾತಕ್ಕೀಡಾಗಿದೆ.

ಕಾರಿನಲ್ಲಿದ್ದ ಚಿಂಚನಸೂರ ಅವರ ತಲೆ, ಮುಖ ಹಾಗೂ ಕಾಲುಗಳಿಗೆ ಗಾಯಗಳಾಗಿವೆ. ಸ್ಥಳದಲ್ಲಿದ್ದ ಸಾರ್ವಜನಿಕರು ಅವರನ್ನು ನಗರದ ಯುನೈಟೆಡ್ ಆಸ್ಪತ್ರೆಗೆ ದಾಖಲಿಸಿದರು.

ತಡರಾತ್ರಿ ಎರಡು ಗಂಟೆ ಸುಮಾರಿಗೆ ಆಸ್ಪತ್ರೆಗೆ ದಾಖಲಿಸಿಕೊಳ್ಳಲಾಗಿದೆ. ಎಲುಬು ಹಾಗೂ ನರಗಳಿಗೆ ಏಟು ಬಿದ್ದಿದೆ. ಆಸ್ಪತ್ರೆಯ ತಜ್ಞ ವೈದ್ಯರು ನಿರಂತರ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಆಸ್ಪತ್ರೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಯಾದಗಿರಿ ಜಿಲ್ಲೆಯ ಗುರುಮಠಕಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಬಾಬುರಾವ ಅವರ ಮನೆ ಕಲಬುರಗಿಯ ಶಾಂತಿನಗರದಲ್ಲಿದೆ. ಕ್ಷೇತ್ರದಲ್ಲಿ ಪ್ರಚಾರ ಮುಗಿಸಿಕೊಂಡು ವಾಪಸ್ ಬರುವಾಗ ಘಟನೆ ನಡೆದಿದೆ ಎಂದು ಗೊತ್ತಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.