ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಲಭೀಮಸೇನ ಜಾತ್ರೆ ರದ್ದು

Last Updated 23 ಡಿಸೆಂಬರ್ 2020, 3:12 IST
ಅಕ್ಷರ ಗಾತ್ರ

ಸೇಡಂ: ತಾಲ್ಲೂಕಿನ ಮೋತಕಪಲ್ಲಿಯಲ್ಲಿ ಡಿ.30ರಂದು ನಡೆಯಬೇಕಿದ್ದ ಮೋತಕಪಲ್ಲಿ ಬಲಭೀಮಸೇನ ಜಾತ್ರೆಯನ್ನು ಕೊರೊನಾ ಕಾರಣ ರದ್ದುಪಡಿಸಲಾಗಿದೆ ಎಂದು ತಹಶೀಲ್ದಾರ್ ಮಲ್ಲೇಶಪ್ಪ ತಿಳಿಸಿದ್ದಾರೆ.

ಡಿ.30ರಂದು ಗ್ರಾಮ ಪಂಚಾಯಿತಿ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯಲಿದೆ. ಚುನಾವಣಾ ಕಾರ್ಯವನ್ನು ಸುಸೂತ್ರವಾಗಿ ನಡೆಸಿಕೊಂಡು ಹೋಗಲು ಭಕ್ತರು ಸಹಕಾರ ನೀಡಬೇಕು. ಜಾತ್ರೆ ನಿಮಿತ್ತ ದೇವಸ್ಥಾನದ ಅರ್ಚಕರಿಂದ ಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಗಳನ್ನು ಸಾಂಪ್ರದಾಯಿಕವಾಗಿ ಆಚರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಪ್ರತಿ ವರ್ಷ ಹೊಸ್ತಲ ಹುಣ್ಣಿಮೆ ಸಂದರ್ಭದಲ್ಲಿ ನಡೆಯುತ್ತಿದ್ದ ಜಾತ್ರೆಗೆ ರಾಜ್ಯ ಸೇರಿದಂತೆ ತೆಲಂಗಾಣ, ಆಂಧ್ರಪ್ರದೇಶಗಳಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT